Gl harusha
ಕರಾವಳಿಸ್ಥಳೀಯ

ಬೈಕ್ ಅಪಘಾತ..ಹಿರಿಯ ಕಾರು ಚಾಲಕ ಮೃತ್ಯು!!

ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.

srk ladders
Pashupathi
Muliya

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಕಾರು ಚಾಲಕ ಬೋಜ ಮೂಲ್ಯ (62) ಮೃತ ವ್ಯಕ್ತಿ.

ಅ.11 ರಂದು ರಾತ್ರಿ 7 ರ ಸುಮಾರಿಗೆ ಬೋಜ ಮೂಲ್ಯ ಅವರು ಮನೆಗೆ ಕೋಳಿ ಮಾಂಸ ಖರೀದಿ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ತಲಪಾಡಿಯ ಚಿಕನ್ ಸ್ಟಾಲ್ ಗೆ ತೆರಳಲು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಅವರಿಗೆ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಪಘಾತವಾದ 7 ದಿನಗಳ ಬಳಿಕ ಬೋಜ ಮೂಲ್ಯ ಅವರು ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಗೊಂಡು ಮನೆಗೆ ತೆರಳಿದ್ದರು. ಇದೀಗ 19 ದಿನಗಳ ಬಳಿಕ ಮನೆಯಲ್ಲಿ ಇವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ