Gl harusha
ಸ್ಥಳೀಯ

ಅಕ್ಷಯ ಕಾಲೇಜ್ : ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಜನ ಜಾಗೃತಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ವನ್ನು ಸ್ಥಳೀಯ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಮಾಡಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ವನ್ನು ಸ್ಥಳೀಯ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಮಾಡಲಾಯಿತು.

srk ladders
Pashupathi
Muliya

ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥೆ ಶ್ರೀಮತಿ ರಶ್ಮಿ ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸರಕಾರದ ಆಡಳಿತ ವ್ಯವಸ್ಥೆಯಲ್ಲಿನ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಯಲ್ಲಿನ ಕೊರತೆ, ದುರ್ಬಲವಾದ ಕಾನೂನು ಮತ್ತು ಶಿಕ್ಷೆ ಗಳು ಜನ ಸಾಮಾನ್ಯರ ಮೇಲೆ ಋಣಾತ್ಮಕ ಪ್ರಭಾವ ಬೀರುತ್ತದೆ.

ಸ್ಥಳೀಯ ಮಟ್ಟದಲ್ಲಿ ಗ್ರಾಮೀಣ ಪ್ರದೇಶದ ಜನರಿಗಿರುವ ಆಡಳಿತ ವ್ಯವಸ್ಥೆಯಲ್ಲಿನ ಅಪಪರಿಪೂರ್ಣ ಜ್ಞಾನ ವನ್ನು ದುರ್ಬಳಕೆ ಮಾಡುತ್ತಿರುವ ನೌಕರಶಾಹಿ ವರ್ಗ ಹಲವು ರೀತಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದೆ.

ಕಚೇರಿಗೆ ಸಂಬಂಧಿಸಿದ ವಿಷಯಗಳಲ್ಲಿ ಹಣ ವಸೂಲಿ, ತೆರಿಗೆಯಲ್ಲಿ ಸಂಗ್ರಹಿಸಿದ ಹಣದ ದುರುಪಯೋಗ, ಅವ್ಯವಹಾರಗಳು ನಿರಂತರವಾಗಿ ನಡೆಯುತ್ತಿದೆ.

ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವು ದೇಶದ ಆರೋಗ್ಯಕರ ಬೆಳವಣಿಗೆಗೆ ನೇರ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಜನರ ಜೀವನ ಮಟ್ಟ ಸುಧಾರಿಸಲು ಆಡಳಿತ ವ್ಯವಸ್ಥೆಯಲ್ಲಿ ಸಾಕಷ್ಟು ಪ್ರಾಮಾಣಿಕ ಸುಧಾರಣೆ ನಿರಂತರ ಜನ ಜಾಗೃತಿ ಕಾರ್ಯಕ್ರಮ ಗಳು ಭ್ರಷ್ಟಾಚಾರ ತಡೆಗಟ್ಟಲು ಸಹಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ರ ಕಾರ್ಯಕ್ರಮಮಾಧಿಕಾರಿ ಶ್ರೀಯುತ ಕಿಶೋರ್ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ 2 ರ ಕಾರ್ಯಕ್ರಮಾಧಿಕಾರಿ ಕುಮಾರಿ ಮೇಘಶ್ರೀ, ಕಾಲೇಜಿನ ಉಪ ಪ್ರಾಂಶುಪಾಲ ರಾದ ಶ್ರೀಯುತ ರಕ್ಷಣ್ ಟಿ ಆರ್ ಉಪಸ್ಥಿತರಿದ್ದರು.

ಎನ್ ಎಸ್ ಎಸ್ ಘಟಕ ಗಳ ವಿದ್ಯಾರ್ಥಿ ನಾಯಕ, ನಾಯಕಿ ಯರು, ರಾಷ್ಟ್ರೀಯ ಸೇವಾ ಯೋಜನೆ ಯ ಸೇವಕರು ಉಪಸ್ಥಿತರಿದ್ದರು.

ಎನ್ ಎಸ್‌ ಎಸ್ ವಿದ್ಯಾರ್ಥಿನಿ ಕುಮಾರಿ ವಿಂಧು ಶ್ರೀ ಸ್ವಾಗತಿಸಿ, ವಂದಿಸಿ ಮತ್ತು ಕಾರ್ಯಕ್ರಮ ವನ್ನು ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ