ಕರಾವಳಿಸ್ಥಳೀಯ

ಪುತ್ತೂರಿನಲ್ಲಿ ನಾಳೆ ‘ಅಶೋಕ ಜನ ಮನ’: ಪುತ್ತೂರು ಸಿಟಿ ಸಂಚಾರ ಮಾರ್ಗ ಬದಲಾವಣೆ!!

ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ಜನ ಸೇರುವ ನಿರೀಕ್ಷೆ ಇದ್ದು. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ನ.2ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿಸಲು ಪುತ್ತೂರು ಉಪವಿಭಾಗಾಧಿಕಾರಿಗಳು ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿಸಿ ಪ್ರಸ್ತಾವನೆಯನ್ನು ಸಲ್ಲಿಸಿರುವ ಮೇರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

SRK Ladders

ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಾವಳಿ 1989ರ ನಿಯಮ 221(ಎ)(5) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ದಿನಾಂಕ: 02.11.2024 0.ಬೆಳಿಗ್ಗೆ 07:00 ಯಿಂದ ಸಂಜೆ  06.00 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3