ರಾಮನಗರ: ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.
ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ.
ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್ ಕುಮಾರಸ್ವಾಮಿ ಕುಂಟುತ್ತಾ ಪ್ರಚಾರ ಕಾರ್ಯ ಮುಂದುವರಿಸಿದರು.