tamanvi
ಕರಾವಳಿಸ್ಥಳೀಯ

ಅಕ್ಷಯ ಕಾಲೇಜ್:ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ರ ಕಾರ್ಯಕ್ರಮಮಾಧಿಕಾರಿ ಕಿಶೋರ್ ಕುಮಾರ್ ರೈ ಪ್ರಮಾಣ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ  ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿಯಾದ  ಅರ್ಪಿತ್ ಟಿ ಎ, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಂಯೋಜಕ ರಾದ ಕುಮಾರಿ ಭವ್ಯ ಶ್ರೀ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 2 ರ ಕಾರ್ಯಕ್ರಮಮಾಧಿಕಾರಿ ಕುಮಾರಿ ಮೇಘ ಶ್ರೀ ಎನ್ ಎಸ್ ಎಸ್. ಘಟಕ ಗಳ ವಿದ್ಯಾರ್ಥಿ ನಾಯಕ, ನಾಯಕಿ ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ಪ್ರಾಧ್ಯಾಪಕಿ ಯರು, ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆಯ ಸೇವಕ ರು ಸೇರಿದಂತೆ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕರಿಸಿದರು.

ಭ್ರಷ್ಟಾಚಾರದ ಕುರಿತು ಜನ ಜಾಗೃತಿ ಮೂಡಿಸುವ ವಿಜಿಲೆನ್ಸ್ ಸಪ್ತಾಹ ದ ಭಾಗವಾಗಿ ಭ್ರಷ್ಟಾಚಾರ ದ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚರ್ಚಾ ಸ್ಪರ್ಧೆ ಗಳನ್ನು ಏರ್ಪಡಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 186