ಕರಾವಳಿರಾಜ್ಯ ವಾರ್ತೆಸ್ಥಳೀಯ

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’

ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಬೃಹತ್‌ ಕಾರ್ಯಕ್ರಮ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಬೃಹತ್‌ ಕಾರ್ಯಕ್ರಮ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್‌ ಕುಮಾರ್‌ ರೈಯವರ ತಾಯಿ ಗಿರಿಜಾ ಎಸ್‌ ರೈಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಳಿಕ ಶ್ರೀ ಶಾರದಾ ಅಂಧ ಕಲಾವಿದರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು

ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಇದರ ಅಧ್ಯಕ್ಷರು, ಶಾಸಕ ಅಶೋಕ್‌ ಕುಮಾರ್‌ ರೈಯವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಫಾದರ್‌ ರೆವರೆಂಡ್‌ ಮಸ್ಕರೇನ್ಹಸ್‌, ಪ್ರಧಾನ ಧರ್ಮಗುರು ಮಾಯಿದೇ ದೇವುಸ್‌ ಚರ್ಚ್‌ ಪುತ್ತೂರು, ಎಸ್‌ ಪಿ ದಾರಿಮಿ ಧರ್ಮಗುರುಗಳು ಪುತ್ತೂರು, ಮಂಜುನಾಥ ಭಂಡಾರಿ, ಶಾಸಕರು, ಕಾರ್ಯಾಧ್ಯಕ್ಷರು ಕೆಪಿಸಿಸಿ, ಹರೀಶ್‌ ಕುಮಾರ್‌ ಜಿಲ್ಲಾಧ್ಯಕ್ಷರು ದ.ಕ ಕಾಂಗ್ರೇಸ್‌ ಸಮಿತಿ, ಕರ್ನಾಟಕ ಸರಕಾರದ ಮಾಜಿ ಸಚಿವರು ವಿನಯ್‌ ಕುಮಾರ್‌ ಸೊರಕೆ, ಮಾಜಿ ಸಚಿವ ಅಭಯಚಂದ್ರ ಜೈನ್‌, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಆಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಸುವರ್ಣ, ಕಾಂಗ್ರೇಸ್‌ ಮುಖಂಡ ಕೃಷ್ಣಪ್ಪ ಸುಳ್ಯ, ಶ್ರೀಮತಿ ಮಮತಾ ಗಟ್ಟಿ ಅಧ್ಯಕ್ಷರು ಗೇರು ಅಭಿವೃದ್ಧಿ ಸಮಿತಿ ಕರ್ನಾಟಕ ಸರಕಾರ, ಸದಾಶಿವ ಉಳ್ಳಾಲ್‌ ಅಧ್ಯಕ್ಷರು ಮೂಡಾ, ಭರತ್‌ ಮುಂಡೋಲಿ ಅಧ್ಯಕ್ಷರು ದ ಕ ಜಿಲ್ಲಾ ಅನುಷ್ಟಾನ ಗ್ಯಾರಂಟಿ ಸಮಿತಿ, ಕಾಂಗ್ರೇಸ್‌ ಮುಖಂಡ ಹೇಮನಾಥ ಶೆಟ್ಟಿ ಕಾವು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್‌ ಮಹಮ್ಮದ್‌, ಡಾ.ರಾಜರಾಮ್‌, ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಂತ ವೈದ್ಯರು, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ನಂತರ ಸುಮಾರು 75,000 ಜನರಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4