ಕರಾವಳಿಸ್ಥಳೀಯ

ಪ್ರಪಾತಕ್ಕೆ ಉರುಳಿದ ಬಸ್: 20 ಪ್ರಯಾಣಿಕರ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಲೋರಾದಲ್ಲಿ ಸೋಮವಾರ (ನ.4) ಸಂಭವಿಸಿದೆ.

ಇಂದು ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು ಈ ವೇಳೆ ಬಸ್ಸಿನಲ್ಲಿ ಕನಿಷ್ಠ 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಪೊಲೀಸರು ಮತ್ತು ಸ್ಥಳೀಯರ ತಂಡಗಳು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

SRK Ladders

ಬಸ್ಸಿನಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಲೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಅಲ್ಲದೆ ಗಂಭೀರ ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 4