ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

SRK Ladders

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3