Gl
ಸ್ಥಳೀಯ

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ!

GL
ಬೆಳ್ತಂಗಡಿ: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

core technologies

ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ.

ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್ ನಲ್ಲಿ ಪತ್ರಕರ್ತರಾಗಿದ್ದ ಅವರು, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕರಾಗಿದ್ದರು. ಬಳಿಕ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದರು.

ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ ಇದು ಎಂದು ಕುಟುಂಬ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119