tamanvi
ಸ್ಥಳೀಯ

ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ ನಿಧನ!

D_shiva_bhat
ಪುತ್ತೂರು: ಶಿಕ್ಷಕ ಕೋಟ್ಯಪ್ಪ ಪೂಜಾರಿ ಅವರು  ನಿಧನರಾಗಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ (55 ವ.) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

maithri

ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ರೂಮ್ ಮಾಡಿ ವಾಸವಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು.

ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಬಳಿಕ ಪ್ರತಿದಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು.

ಸೋಮವಾರ ಬೆಳಗ್ಗೆ ಬೊಳುವಾರಿನ ಅವರ ರೂಂನಲ್ಲಿ ನಿಧನರಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 127