ಸ್ಥಳೀಯ

ಬಂಟ್ವಾಳ: ಅರಣ್ಯ ಇಲಾಖೆ సిబ్బంది ಕಚೇರಿಯಲ್ಲಿ ಕುಸಿದು ಬಿದ್ದು ಸಾವು!!

GL
ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ

chennai-shopping
maithri

ವೀರಕಂಬ ಮಜ್ಯೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್‌ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122