ಪುತ್ತೂರು: ಬೊಳುವಾರು (bolwar)ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ,(Vishwakarma) ವಿಶ್ವಕರ್ಮ ಮಹಿಳಾ ಮಂಡಳಿ, ಮಂಗಳೂರು ಎಸ್.ಕೆ. ಗೋಲ್ಡ್ ಸ್ಮಿತ್ಸ್ (SKGold smith)ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಭಾನುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಉಚಿತ ಸಾಮೂಹಿಕ ಬ್ರಹ್ಮೋಪದೇಶ ನೆರವೇರಿತು.
ರಮೇಶ್ ಪುರೋಹಿತ್ ಗೇರುಕಟ್ಟೆ ನೇತೃತ್ವದ ವೈದಿಕ ವೃಂದದಿಂದ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಒಟ್ಟು 8 ಮಂದಿ ವಟುಗಳಿಗೆ ಬ್ರಹ್ಮೋಪದೇಶ ನೀಡಲಾಯಿತು.
ವಟುಗಳಿಗೆ ಸಂಧ್ಯಾವಂದನಾ ಪುಸ್ತಕ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು ಮಾತನಾಡಿ, ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಬ್ರಹ್ಮೋಪದೇಶ ದೀಕ್ಷೆ ಪಡೆದ ವಟುಗಳು ತಮಗೆ ನೀಡಿರುವ ಸಂಸ್ಕಾರದ ಮಾರ್ಗದರ್ಶನವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ. ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಮುಖ್ಯ ಅತಿಥಿಯಾಗಿದ್ದ ಉಪೇಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಹರೀಶ್ ಆಚಾರ್ಯ ಕೊಡಪಟ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಕಾರ್ಯದರ್ಶಿ ಭವ್ಯ ವಾಧಿರಾಜ್ ಪುತ್ತಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾಯೋಜಕರಾಗಿ ಸಹಕರಿಸಿದವರಿಗೆ ಸ್ಮರಣಕೆ ನೀಡಿ ಗೌರವಿಸಲಾಯಿತು.
ಶ್ರೀನಿವಾಸ್ ಪಡೀಲ್ ಪ್ರಾರ್ಥಿಸಿದರು. ವಿಶ್ವಬ್ರಾಹ್ಮಣ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಆಚಾರ್ಯ ಅಜ್ಜಿನಡ್ಕ ಸ್ವಾಗತಿಸಿ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ್ ಆಚಾರ್ಯ ವಂದಿಸಿದರು. ಕಿಶನ್ ಬಿ.ವಿ., ಶಾಂತಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು.