Gl jewellers
ಸ್ಥಳೀಯ

ಪುತ್ತೂರು ಪಿಎಲ್‌ ಡಿ ಬ್ಯಾಂಕ್ ಚುನಾವಣೆ;ಎರಡು ನಾಮಪತ್ರ ತಿರಸ್ಕೃತ!! ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು.!

Karpady sri subhramanya
ಪುತ್ತೂರು ಪಿಎಲ್ ಡಿ ಬ್ಯಾಂಕ್‌ನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ 

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕ್‌ನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕ್‌ಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ.

Akshaya College

ಪಿಎಲ್ ಡಿ ಬ್ಯಾಂಕ್‌ನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯ ರಾಜಶೇಖರ ಜೈನ್ ಮತ್ತು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎಆರ್ ಒ ರಘು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಎಂಬವರು ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕ್‌ಗೆ ತೆರಳಿ ಚುನಾವಣಾ ಅಧಿಕಾರಿ ಅವರನ್ನು ತರಾಟೆಗೆ ಎತ್ತಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.

ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ, ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು. ನಿಮ್ಮ ಮೇಲೆಮೊದಲೇ ನನಗೆ ದೂರು ಬಂದಿತ್ತು. ಸುದಾರಿಸಬಹುದು ಎಂದು ಸುಮ್ಮನಿದ್ದ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯನ್ನು ಎಚ್ಚರಿಸಿದರು.

ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು. ಲಂಚ ತಗೊಂಡು, ಅನ್ಯಾಯ ಮಾಡಿದನಿಮ್ಮನ್ನು ಸಸ್ಪೆಂಡ್ ಮಾಡಿಸ್ತೇನೆ. ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು ಎಚ್ಚರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು…