tamanvi
ಸ್ಥಳೀಯ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು| 350 ಕೋಟಿ ಅನುದಾನ ಮಂಜೂರಾತಿಗೆ ಶಾಸಕ ಅಶೋಕ್ ರೈ ಮನವಿ

D_shiva_bhat
ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಗೊಳಪಟ್ಟ ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮ ನವಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಗೊಳಪಟ್ಟ ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮ ನವಿ ಸಲ್ಲಿಸಿದ್ದಾರೆ.

maithri

ಕುಮಾರಧಾರ ಮತ್ತು ನೇತ್ರಾವತಿ ಸಂಗಮ ಕ್ಷೇತ್ರದಲ್ಲಿ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾ ನವಿದ್ದು ಕಿಂಡಿ ಅಣೆಕಟ್ಟು ನಿರ್ಮಾಣವಾದಲ್ಲಿ ಸ್ಥಳೀಯ ಕೃಷಿಕರಿಗೆ ನೀರಾವರಿ ಸೌಲಭ್ಯದ ಜೊತೆಗೆ ಕ್ಷೆತ್ರಕ್ಕೂ ಪ್ರವಾಸೋಧ್ಯಮದ ಮೆರುಗನ್ನು ನೀಡಲಿದೆ. ಇಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಬೇಕೆಂಬುದು ಇಲ್ಲಿನ ಜನತೆಯ ಬಹುವರ್ಷಗಳ ಬೇಡಿಕೆಯೂ ಆಗಿದೆ. ಇಲ್ಲಿನ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಲ್ಲಿ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದ್ದು ಸುಮಾರು ೩೫೦ ಕೋಟಿ ರೂ ಅನುದಾ ನದ ಅಗತ್ಯವಿದೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜ ನಿಯರ್ ವೆಂಕಟೇಶ್ ಪ್ರಸಾದ್ ಅವರ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ.

ಉದ್ದೇಶಿತ ಸ್ಥಳದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದಲ್ಲಿ ಉಪ್ಪಿನಂಗಡಿ ಪ್ರವಾಸೋಧ್ಯಮ ಕೇಂದ್ರವಾಗುವುದರಲ್ಲಿ ಅನುಮಾನವೇ ಇಲ್ಲ. ಉಪ್ಪಿನಂಗಡಿ ದೇವಸ್ಥಾನದ ಸುತ್ತ ಅತ್ಯಂತ ಸುಂದರ ತಾಣ ನಿರ್ಮಾಣವಾಗಲಿದೆ. ಸಂಗಮ ಭಾಗದಲ್ಲಿಯೇ ಇದು ನಿರ್ಮಾಣವಾಗುವುದರಿಂದ ಕ್ರಿಕರಿಗೂ ಪ್ರಯೋಜನವಾಗಲಿ ದೆ. ಇಲ್ಲಿನ ಕಿಂಡಿ ಅಣೆಕಟ್ಟು ನಿರ್ಮಾಣ ಯೋಜನೆ ನನ್ನ ಕನಸಾಗಿದ್ದು ಅದನ್ನು ನನಸ ಮಾಡಿಸುವಲ್ಲಿ ಈಗಾಗಲೇ ಎರಡು ಹೆಜ್ಜೆ ಮುಂದಿಟ್ಟಿದ್ದೇವೆ. ಸುಮಾರು 350 ಕೋಟಿ ರೂ ಯೋಜನೆ ಇದಾಗಿದ್ದು ಈಗಾಗಲೇ ಉಪಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ, ನೀರಾವರಿ ನಿಗಮದ ಮುಖ್ಯ ಇಂಜನಿಯರ್ ಜೊತೆಯೂ ಮಾತನಾಡಿದ್ದೇನೆ. ಅನುದಾನ ಸಿಕ್ಕೇ ಸಿಗಲಿದೆ ಎಂಬ ಸಂಪೂರ್ಣ ಭರವಸೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125