ಪುತ್ತೂರು: “ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ‘ ಸ್ವಚ್ಛತಾ ಅಭಿಯಾನ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ ಮಿಶನ್ ಗ್ರಾಮೀಣ ಜಿಲ್ಲಾ ನೆರವು ಘಟಕ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಬಡಗನ್ನೂರು ಇವುಗಳ ನೇತೃತ್ವ ವಹಿಸಿದ್ದವು.
ಬಡಗನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ ಅಭಿಯಾನಕ್ಕೆ ಚಾಲನೆ ನೀಡಿ, ಪರಿಸರ ಸ್ವಚ್ಛತೆ ನಮ್ಮೆಲ್ಲರ ಆಧ್ಯತೆಯಾಗಬೇಕು ಎಂದು ಕರೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಉಪಾಧ್ಯಕ್ಷೆ ಸುಶೀಲ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಯಶೋಧ, ಉಪಾಧ್ಯಕ್ಷ ಇಬ್ರಾಹಿಂ ಕೆ., ಹಿರಿಯ ಶಿಕ್ಷಕಿ ಶಶಿಕಲಾ, ಶಿಕ್ಷಕ ಗಣೇಶ ನಾಯಕ್ ಪುತ್ತೂರು, ಎಸ್ ಡಿ.ಎಂ ಸಿ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ. ಕಾರ್ಯಕ್ರಮ ನಿರ್ವಹಿಸಿದರು. ಅಭಿಯಾನದಡಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು.