ಸ್ಥಳೀಯ

ಸಜಂಕಾಡಿ ಶಾಲೆಯಲ್ಲಿ ‘ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ’ ಅಭಿಯಾನ

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ' ಸ್ವಚ್ಛತಾ ಅಭಿಯಾನ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: “ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ‘ ಸ್ವಚ್ಛತಾ ಅಭಿಯಾನ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ ಮಿಶನ್ ಗ್ರಾಮೀಣ ಜಿಲ್ಲಾ ನೆರವು ಘಟಕ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಬಡಗನ್ನೂರು ಇವುಗಳ ನೇತೃತ್ವ ವಹಿಸಿದ್ದವು.

ಬಡಗನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ ಅಭಿಯಾನಕ್ಕೆ ಚಾಲನೆ ನೀಡಿ, ಪರಿಸರ ಸ್ವಚ್ಛತೆ ನಮ್ಮೆಲ್ಲರ ಆಧ್ಯತೆಯಾಗಬೇಕು ಎಂದು ಕರೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಉಪಾಧ್ಯಕ್ಷೆ ಸುಶೀಲ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಯಶೋಧ, ಉಪಾಧ್ಯಕ್ಷ ಇಬ್ರಾಹಿಂ ಕೆ., ಹಿರಿಯ ಶಿಕ್ಷಕಿ ಶಶಿಕಲಾ, ಶಿಕ್ಷಕ ಗಣೇಶ ನಾಯಕ್ ಪುತ್ತೂರು, ಎಸ್ ಡಿ‌.ಎಂ ಸಿ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ. ಕಾರ್ಯಕ್ರಮ ನಿರ್ವಹಿಸಿದರು. ಅಭಿಯಾನದಡಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124