Gl jewellers
ಸ್ಥಳೀಯ

ಫೆ. 16ರಂದು ದ್ವಾರಕೋತ್ಸವ 2025 | ಪುಸ್ತಕ ಬಿಡುಗಡೆ, ಕೃಷಿ – ಆರ್ಥಿಕ ವಿಚಾರಗೋಷ್ಠಿ, ಯಕ್ಷಗಾನ – ಭರತನಾಟ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ

ದ್ವಾರಕಾ ಪ್ರತಿಷ್ಠಾನದ ವತಿಯಿದ ಫೆ. 16ರಂದು ದ್ವಾರಕೋತ್ಸವ 2025 ಸಮಾರಂಭ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆದಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದ್ವಾರಕಾ ಪ್ರತಿಷ್ಠಾನದ ವತಿಯಿದ ಫೆ. 16ರಂದು ದ್ವಾರಕೋತ್ಸವ 2025 ಸಮಾರಂಭ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಾರಕಾ ಕಾರ್ಪೋರೇಷನ್ ಪ್ರೈವೇಟ್ ಲಿಮಿಟೆಡ್ ಹಾಗೂ ದ್ವಾರಕಾ ಕಲಾಶಾಲೆಯ ವಾರ್ಷಿಕ ಕಾರ್ಯಕ್ರಮವಾಗಿ ದ್ವಾರಕೋತ್ಸವ ಹಮ್ಮಿಕೊಳ್ಳಲಾಗಿದೆ. ಒಂದು ದಿನ ನಡೆಯುವ ಈ ಸಮಾರಂಭದಲ್ಲಿ ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.

ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ್ ಕುಂಬ್ಳೆ ಮಾತನಾಡಿ, ಬೆಳಿಗ್ಗೆ 9.30ರಿಂದ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಅಂಬಿಕಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮಕ್ಕಳ ತಜ್ಞ ಹಾಗೂ ಆಪ್ತ ಸಲಹೆಗಾರರಾದ ಡಾ. ಸುಲೇಖಾ ವರದರಾಜ್ ಹಾಗೂ ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಮುಖ್ಯ ಅಭ್ಯಾಗತರಾಗಿರುವರು. ಇದೇ ಸಂದರ್ಭ ಐವರು ಸಾಧಕರನ್ನು ಸನ್ಮಾನಿಸಲಾಗುವುದು. ಸಾವಯವ ಕೃಷಿ ಕ್ಷೇತ್ರದ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ, ಭಾರತೀಯ ಭೂ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದ ಸೈನಿಕ, ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ. ಗೋಪಾಲಕೃಷ್ಣ ಕಾಂಚೋಡು, ಯಕ್ಷಗಾನ ಹಿಮ್ಮೇಳದ ಪದ್ಯಾಣ ಶಂಕರನಾರಾಯಣ ಭಟ್ಟ, ವೈಜ್ಞಾನಿಕ ಸಂಶೋಧಕ ಸ್ವಸ್ತಿಕ್ ಪದ್ಮ ಮುರ್ಗಜೆ, ಸಾಮಾಜಿಕ ಜಾಲತಾಣ ಹಾಗೂ ಆಹಾರೋದ್ಯಮ ಕ್ಷೇತ್ರದ ಸುದರ್ಶನ ಭಟ್ಟ ಬೆದ್ರಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಇದೇ ಸಂದರ್ಭ ಹೊಸ ಪುಸ್ತಕಗಳ ಬಿಡುಗಡೆ ನಡೆಯಲಿದ್ದು, ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ, ಸಾಹಿತಿ ಡಾ. ಶ್ರೀಧರ ಎಚ್.ಜಿ. ಪುಸ್ತಕ ಬಿಡುಗಡೆ ಮಾಡುವರು. ವಿದ್ವಾನ್ ಗ.ನಾ. ಭಟ್ಟ ಮೈಸೂರು ಅವರು ರಚಿಸಿದ ಕಾದಂಬರಿ ಸತೀ ಸಾವಿತ್ರೀ, ಕೃಷ್ಣಮೂರ್ತಿ ಕೆಮ್ಮಾರ ರಚಿಸಿರುವ ಪುರಾಣ ರಸಪ್ರಶ್ನಾವಲೀ ಪುಸ್ತಕ ಅನಾವರಣಗೊಳ್ಳಲಿದೆ. ಕೀರ್ತಿಶೇಷ ಮಿತ್ತೂರು ಪುರೋಹಿತ ಶಂಕರನಾರಾಯಣ ಭಟ್ಟ ಸಂಗ್ರಹಿಸಿ ಸಂಪಾದಿಸಿದ ವೇದವಸಂತ ಹಾಗೂ ವೇದಮಾಧವ ಕೃತಿಯನ್ನು ವೇ.ಬ್ರ. ಮಿತ್ತೂರು ಪುರೋಹಿತ ಶ್ರೀನಿವಾಸ ಭಟ್ಟ ಪರಿಷ್ಕರಣೆ ಹಾಗೂ ಪರಿವರ್ಧನೆ ಮಾಡಿದ್ದು, ಇದು ಲೋಕಾರ್ಪಣೆಗೊಳ್ಳಲಿದೆ. ನರಿಮೊಗರು ಸರಸ್ವತಿ ವಿದ್ಯಾಮಂದಿರದ ಅಧ್ಯಕ್ಷ ಅವಿನಾಶ ಕೊಡಂಕಿರಿ, ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನದ ಅಧ್ಯಕ್ಷ ರಮೇಶ ಭಟ್ಟ ಬಿ., ಯುವ ಬರಹಗಾರ ನವೀನಕೃಷ್ಣ ಎಸ್. ಉಪ್ಪಿನಂಗಡಿ ಕೃತಿ ಪರಿಚಯ ಮಾಡಲಿದ್ದಾರೆ ಎಂದು ವಿವರಿಸಿದರು.

ಬೆಳಿಗ್ಗೆ 11.30ರಿಂದ ಕೃಷಿ ಹಾಗೂ ಆರ್ಥಿಕ ವಿಚಾರಗೋಷ್ಠಿ ನಡೆಯಲಿದ್ದು, ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಗೋಪಾಲಕೃಷ್ಣ ಕಾಂಚೋಡು ಅವರು ಕೃಷಿಯಲ್ಲಿ ಅಡಿಕೆಗೆ ಪರ್ಯಾಯ, ವಿಶ್ವೇಶ್ವರ ಭಟ್ ಬಂಗಾರಡ್ಕ ಅವರು ರಿಯಲ್ ಎಸ್ಟೇಟ್ ಹಾಗೂ ಆರ್ಥಿಕತೆ, ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ ಅವರು ದೇಶೀ ಗೋವು ಹಾಗೂ ಗವ್ಯೋತ್ಪನ್ನಗಳು ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ದ್ವಾರಕಾ ಕಲಾಶಾಲೆಯ ಗುರುಗಳಾದ ಬಾಬು ಕಾಟುಕುಕ್ಕೆ ಹಾಗೂ ಕಲಾಶಾಲೆಯ ವಿದ್ಯಾರ್ಥಿಗಳಿಂದ ಕೀಬೋರ್ಡ್ ವಾದನ ನಡೆಯಲಿದೆ. ಮಧ್ಯಾಹ್ನ 2ರಿಂದ ಚೂಡಾಮಣಿ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.

ಸಂಜೆ 4ರಿಂದ ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾನಭೂಷಣ ವಿದ್ವಾನ್ ವೆಂಕಟಕೃಷ್ಣ ಭಟ್ ಗುಂಡ್ಯಡ್ಕ ಮತ್ತು ಬಳಗದಿಂದ ಭಾವಗಾನ ಲಹರಿ ನಡೆಯಲಿದೆ. ಸಂಜೆ 6ರಿಂದ ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಶ್ರೀ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಮತ್ತು ಅವರ ಶಿಷ್ಯರಿಂದ ಮಧುರಾಕೃತಿ – ಶ್ರೀ ಕೃಷ್ಣ ಲೀಲೆಗಳು ಭರತನಾಟ್ಯ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಅಮೃತಕೃಷ್ಣ, ಸಿಬ್ಬಂದಿ ದುರ್ಗಾ ಗಣೇಶ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ