Gl jewellers
ಸ್ಥಳೀಯ

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ಭಾರತೀಯ ಭಾಸ್ಕರ ಎಸ್. ಗೌಡ ಇಚ್ಚಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು

ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ)ಬ್ಯಾಂಕ್‌ಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಚಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ)ಬ್ಯಾಂಕ್‌ಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಚಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Papemajalu garady
Karnapady garady

ಫೆ.25 ರಂದು ಬ್ಯಾಂಕಿನ ಸಭಾಭವನದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಎಸ್ ಗೌಡ ಇಚ್ಚಂಪಾಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪ್ರವೀಣ್ ರೈ ಪಂಜೊಟ್ಟು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಅಭ್ಯರ್ಥಿಗಳು ಇರದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ರಘು ಎಸ್.ಎಂ. ಅವರು ನಡೆಸಿಕೊಟ್ಟರು. ಬ್ಯಾಂಕಿನ ವ್ಯವಸ್ಥಾಪಕ ಶೇಖ‌ರ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

ಬ್ಯಾಂಕಿನ ನಿರ್ದೆಶಕರಾದ ಸುಜಾತ ರಂಜನ್ ರೈ ಬೀಡು, ಯುವರಾಜ್ ಪೆರಿಯತ್ತೋಡಿ, ಯತೀಂದ್ರ ಕೊಚ್ಚಿ, ವಿಕ್ರಮ್ ರೈ ಸಾಂತ್ಯ ಬಾಳಪ್ಪ ಯಾನೆ ಸುಂದರ ಪೂಜಾರಿ ಬಡಾವು, ಚಂದ್ರಾವತಿ ಅಭಿಕಾ‌ರ್, ಸ್ವಾತಿ ರೈ ಆರ್ತಿಲ, ಬಾಬು ಮುಗೇರ, ರಾಜು ಮೋನು ಪಿ.ಉಳಿಪು, ಕುಶಾಲಪ್ಪ ಗೌಡ ಅನಿಲ, ನಾರಾಯಣ ನಾಯ್ಕ ಏಣಿತ್ತಡ್ಕ, ಚೆನ್ನಕೇಶವ ಉಪಸ್ಥಿತರಿದ್ದರು.

ಬ್ಯಾಂಕಿನ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಸಹಕಾರ ಭಾರತಿ ಹಾಗೂ 2 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ