pashupathi
ಸ್ಥಳೀಯ

ಫರಂಗಿಪೇಟೆ: ಪಿಯುಸಿ ವಿದ್ಯಾರ್ಥಿ ನಾಪತ್ತೆ!!

tv clinic
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

akshaya college

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.

ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 116