ಸ್ಥಳೀಯ

ಪುತ್ತೂರು ಪೇಟೆಯಲ್ಲಿ ಹೆಜ್ಜೇನು ದಾಳಿ! | 15ಕ್ಕೂ ಹೆಚ್ಚು ಜನರಿಗೆ ಗಾಯ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ.

ಹೆಜ್ಜೇನು ದಾಳಿಯಿಂದ ಸುಮಾರು 10ರಿದ 15 ಜನರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ ಹೆಜ್ಜೇನಿನ ದಾಳಿಗೆ ಗುರಿಯಾಗಿದ್ದಾರೆ. ಅಲ್ಲದೇ ಹೆಜ್ಜೇನು ವ್ಯಕ್ತಿಯೋರ್ವರ ಮೇಲೆ ಸುಮಾರು 20 ನಿಮಿಷಗಳ ಕಾಲ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107