Gl
ಸ್ಥಳೀಯ

ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಐತಿಹಾಸಿಕ ಕೋಟಿ – ಚೆನ್ನಯ ಕಂಬಳ 

ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು.

rachana_rai
Pashupathi

ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಬೆಳಿಗ್ಗೆ ಕಂಬಳ ಉದ್ಘಾಟಿಸುವರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು. ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸುವರು ಎಂದರು.

akshaya college

ಸಂಜೆ 6ಗಂಟೆಗೆ ಶಾಸಕ ಅಶೋಕ್‌ಕುಮಾ‌ರ್ ರೈ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಸಚಿವರಾದ ಜಿ.ಪರಮೇಶ್ವರ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಉದ್ಯಮಿ ಪ್ರಕಾಶ್ ಶೆಟ್ಟಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಶಾಸಕರಾದ ರವಿ ಕುಮಾರ್ ಗಣಿಗ, ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು, ಭಾಗೀರಥಿ ಮುರುಳ್ಯ, ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್‌ಕಕುಮಾ‌ರ್ ಪುತ್ತೂರು, ಮುಖಂಡರಾದ ರಮಾನಾಥ ರೈ, ನಳಿನ್‌ಕುಮಾ‌ರ್ ಅಭಯಚಂದ್ರ

ಸಿನಿಮಾ ನಟಿಯರಾದ ನಟ ರಚನಾ ರೈ, ರಚಿತಾ ರಾಮ್, ನಿರೂಪಕಿ ಅನುಶ್ರೀ, ನಟರಾದ ಲೂಸ್ ಮಾದ ಯೋಗಿ, ಉಗ್ರಂ ಮಂಜು, ಗಗನ್ ಚಿನ್ನಪ್ಪ, ನಿರ್ದೇಶಕ ಸುಕೇಶ್ ಶೆಟ್ಟಿ, ಬಿಗ್‌ಬಾಸ್‌ ವಿಜೇತ ಹನುಮಂತ, ಧನರಾಜ್ ಆಚಾ‌ರ್ ಭಾಗವಹಿಸುವರು ಎಂದು ಅವರು ತಿಳಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ಅಗರಿ ನವೀನ್ ಭಂಡಾರಿ (ಆರ್‌ಬಿಐ ಉತ್ತರ ವಲಯದ ಮಾಜಿ ನಿರ್ದೇಶಕ), ಸುರೇಶ್ ಭಟ್ ಬಲ್ನಾಡು (ಕೃಷಿ ತಜ್ಞ), ರೆ.ಫಾ.ವಿಜಯ ಹಾರ್ವಿನ್ (ಶೈಕ್ಷಣಿಕ-ಧಾರ್ಮಿಕ), ಹರಿಪ್ರಸಾದ್ ರೈ (ಎಚ್‌ಪಿಆ‌ರ್ ಪ್ಯಾರಾ ಮೆಡಿಕಲ್ ಕಾಲೇಜು ಸಂಸ್ಥಾಪಕ), ಸಾಲೆತ್ತೂರು ಪಂಜರಕೋಡಿ ಮಹಮ್ಮದ್ ಕುಂಞ, ಬಾಳೆಪುಣಿ ಸಂಕ ಇದುಕುಂಞ ಬ್ಯಾರಿ (ಕಂಬಳ ಕ್ಷೇತ್ರ), ವಿನ್ಸಂಟ್ ಫರ್ನಾಂಡಿಸ್ (ಸಾಮಾಜಿಕ ಮತ್ತು ಶೈಕ್ಷಣಿಕ) ಅವರನ್ನು ಸನ್ಮಾನಿಸಲಾಗುವುದು ಎಂದರು.

ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಸಂಚಾಲಕ ವಸಂತಕುಮಾ‌ರ್ ರೈ ದುಗ್ಗಳ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಕಂಬಳ ಸಮಿತಿ ಪದಾಧಿಕಾರಿ ನಿರಂಜನ ರೈ ಮಠಂತಬೆಟ್ಟು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಈ ವರ್ಷ ಸುಮಾರು 175 ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು, ಕಂಬಳ ಸ್ಪರ್ಧೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು. ಶೀಘ್ರ ತೀರ್ಪಿಗಾಗಿ ಆಧುನಿಕ ತಂತ್ರಜ್ಞಾನದೊಂದಿಗೆ ‘ಲೇಸರ್ ಫಿನಿಶಿಂಗ್‌’ ವ್ಯವಸ್ಥೆ ಮಾಡಲಾಗುತ್ತಿದೆ. ಮಧ್ಯಾಹ್ನ 12ರಿಂದ ಕೆಸರುಗದ್ದೆ ಓಟದ ಸ್ಪರ್ಧೆ ಸಲಾಗಿದೆ ಎಂದರು.

ಕನೆಹಲಗೆ, ಹಗ್ಗ ಹಿರಿಯ ಮತ್ತು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕೋಣಗಳಿಗೆ 2 ಪವನ್ ಚಿನ್ನದ ಬಹುಮಾನ, ದ್ವಿತೀಯ ಬಹುಮಾನವಾಗಿ 1 ಪವನ್ ಚಿನ್ನದ ಬಹುಮಾನ, ಅಡ್ಡಹಲಗೆ, ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕೋಣಗಳಿಗೆ 1 ಪವನ್ ಚಿನ್ನ, ದ್ವಿತೀಯ ಬಹುಮಾನವಾಗಿ ಅರ್ಧ ಪವನ್ ಚಿನ್ನದ ಬಹುಮಾನವಿದೆ. ವಿಜೇತ ಕೋಣಗಳ ಮಾಲೀಕರಿಗೆ ಚಿನ್ನದ ಬಹುಮಾನದ ಜತೆಗೆ ಕೋಟಿ-ಚೆನ್ನಯ ಟ್ರೋಫಿ ನೀಡಲಾಗುವುದು. ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ರಾಜ್ಯ ಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆಯಲ್ಲಿ ಪ್ರಥಮ ₹ 10 ಸಾವಿರ, ದ್ವಿತೀಯ ₹ 7,500 ಮತ್ತು ತೃತೀಯ ₹ 5 ಸಾವಿರ ಬಹುಮಾನದ ಜತೆಗೆ ಕೋಟಿ-ಚೆನ್ನಯ ಟ್ರೋಫಿ ನೀಡಲಾಗುವುದು ಎಂದು ಅವರು ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…