ಸ್ಥಳೀಯ

ವಿಟ್ಲ: ಅಪರೂಪದ ಶಾಸನ ಪತ್ತೆ! ಕನ್ನಡದ ವಿಚಾರ – ತುಳು ಲಿಪಿಯಲ್ಲಿ ಬರೆದಿರುವ ಶಾಸನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.

maithri

ಶಾಸನವನ್ನು ಎರಡು ಕಣಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ 11 ಸಾಲುಗಳು ಮತ್ತು ಇನ್ನೊಂದು ಫಲಕದಲ್ಲಿ 4 ಸಾಲುಗಳಿವೆ.

ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ (ಸಾಮಾನ್ಯ ವರ್ಷ 1879) ಪ್ರಮಾಧಿ ಸಂವತ್ಸರದ ಉತ್ತರಾಯಣದ ಬಹುಳ ಬುಧವಾರದ ಕುಂಭ ಲಗ್ನದಲ್ಲಿ ಹಾಕಲಾಗಿದೆ. ಈ ಸಂದರ್ಭದಲ್ಲಿ ವಿಟ್ಲದ ಬಾಕ್ರಬೈಲಿನ ನೆತ್ರಕೆರೆಯ ಮಠದಲ್ಲಿ ಶ್ರೀಗಣಪತಿ ಲಕ್ಷ್ಮೀನಾರಾಯಣ ದೇವರನ್ನು ಪ್ರತಿಷ್ಠಾಪಿಸಿರುವುದು ಹಾಗೆಯೆ ಪ್ರತಿಷ್ಠಿತ ದೇವರ ನಿತ್ಯ ಸೇವೆಯ ವಿನಿಯೋಗಕ್ಕಾಗಿ ನಗದು ಸಹಿತ ದಾನವನ್ನು ಕುಕ್ಕಿಲದ ಪುಟ್ಟಣ ಭಟ್ಟರ ಮಗ ಈಶ್ವರ ಭಟ್ಟರು ನೀಡಿರುವುದು ಶಾಸನದಿಂದ ತಿಳಿದುಬರುತ್ತದೆ.

ಈ ಕ್ಷೇತ್ರ ಕಾರ್ಯ ಶೋಧನೆಯಲ್ಲಿ ಕುಕ್ಕೆಸುಬ್ರಹ್ಮಣ್ಯ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರದ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಇತಿಹಾಸ ಮತ್ತು ಪುರಾತತ್ತ ಸಂಶೋಧನಾರ್ಥಿ ಮಂಜುನಾಥ ನಂದಳಿಕೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಎನ್. ಶಂಕರನಾರಾಯಣ ಭಟ್ಟ, ಡಾ.ಎನ್. ತಿರುಮಲೇಶ್ವರ ಭಟ್ಟ, ಎನ್. ರವೀಶ, ಎನ್. ಮಹೇಶ, ಗಣೇಶ ಭಟ್, ಸುರೇಶ್ ಎನ್., ಶರ್ಮಿಳಾ, ಯು.ನಾರಾಯಣ ಭಟ್, ಮಂಜುಳಗಿರಿ ಈಶ್ವರ ಭಟ್ ಸಹಕರಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124