ಮಾಣಿ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರ ಸಂಘದ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಚ್ಚಿದಾನಂದ ರೈ ಟಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿ, ಆಡಳಿತ ಮಂಡಳಿಗೆ ನೇಮಕಗೊಂಡಿದ್ದಾರೆ.
ಪುತ್ತೂರು ಸಹಕಾರ ಸಂಘಗಳ ಹಿರಿಯ ಲೆಕ್ಕ ಪರಿಶೋಧಕಿ ಕವಿತಾ ಕೆ. ಅವರು ರಿಟರ್ನಿಂಗ್ ಆಫೀಸರ್ ಆಗಿದ್ದು, ಚುನಾವಣಾ ಪ್ರಮಾಣಪತ್ರ ನೀಡಿದರು.