ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಸುತ್ತೋಲೆ ಹೊರಡಿಸಿದೆ.
Browsing: central
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್, ಎನ್‌ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ನವದೆಹಲಿ: ಕಳೆದ 10 ವರ್ಷಗಳಿಂದ ನವೀಕರಿಸದ ಆಧಾರ್ ಕಾರ್ಡ್‌ಗಳು ಈ ವರ್ಷದ ಜೂನ್ 14 ರ ನಂತರ ಅಮಾನ್ಯವಾಗಲಿದೆ. ಹೀಗಾಗಿ ಅದಕ್ಕೂ ಮೊದಲು ನವೀಕರಣ ಮಾಡುವುದು ಅಗತ್ಯ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೈನ್ 2023 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್ ಪ್ರಧಾನ್ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿದ್ದಾರೆ. ತೃತೀಯ…
ನವದೆಹಲಿ: ಲೋಕಸಭೆ ಚುನಾವಣೆ ರಣರಂಗಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್ ಅವರ…