ಪುತ್ತೂರು: ಖರೀದಿಸಿದ ಅಶೋಕ್ ಲೈಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನದಲ್ಲಿ ನಿರಂತರ ದೋಷ ಉಂಟಾದ ಗ್ರಾಹಕರಿಗೆ ನಷ್ಟ ಪರಿಹಾರ ನೀಡುವಂತೆ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
Browsing: court
ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ.
ಅನಾರೋಗ್ಯ ಪೀಡಿತರಾಗಿ ಮಂಗಳೂರಿನ ಫಲ್ನೀರ್ ಬಳಿ ಇರುವ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ರಾಹಿಂ ಯು.ಎಚ್ ರವರ ವೈದ್ಯಕೀಯ ದಾಖಲೆಗಳನ್ನು ನೀಡದ ಕಾರಣ ಮಂಗಳೂರಿನ ವಕೀಲರಾದ ಪಿ.ಬಿ ಭಟ್ ರವರು ಗ್ರಾಹಕರ ಆಯೋಗದ ನ್ಯಾಯಾಲಯದಲ್ಲಿ ಕಕ್ಷಿದಾರರ ಪರವಾಗಿ ದೂರು ದಾಖಲಿಸಿ, ಯುನಿಟಿ ಅಸ್ಪತ್ರೆಯವರು ರೋಗಿಗೆ ಸಂಬಂಧ ಪಟ್ಟ ದಾಖಲೆ ಪತ್ರಗಳನ್ನು ತಕ್ಕ ಸಮಯಕ್ಕೆ ನೀಡದಿರುವ ಬಗ್ಗೆ ವಾದ ಮಂಡಿಸಿದ್ದರು.
ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್, ಎನ್‌ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಬೇರೆ ಆಗುತ್ತಾರೆ.
ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ…
ಇಸ್ಲಾಮಾಬಾದ್: 1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನವು ತನ್ನ ಆಕ್ರಮಿತ ಕಾಶ್ಮೀರ (ಪಿಒಕೆ), ಆಜಾದ್ ಜಮ್ಮು ಕಾಶ್ಮೀರ (ಎಜೆಕೆ)…
ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ…