ಭಾರತದ ಸಂವಿಧಾನ ರೂಪುಗೊಳ್ಳುವ ಮುನ್ನವೆ ಸರ್ವಧರ್ಮ ಸಮನ್ವಯದ ತತ್ವಗಳು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರೂಪಿಸಲ್ಪಟ್ಟವು ಎಂದು ರಾಜ್ಯದ ಗೃಹ ಸಚಿವ ಡಾ.ಜಿ ಪರಮೇಶ್ವರ ನುಡಿದರು.
Browsing: deeposthsva
:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗುತ್ತಿರುವ ಕ್ಷೇತ್ರದ ಲಕ್ಷದೀಪೋತ್ಸವ ಪ್ರಯುಕ್ತ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ 45ನೇ ವರ್ಷದ ವಸ್ತುಪ್ರದರ್ಶನಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಯೂನಿಸೆಫ್ ಹೈದರಾಬಾದ್ ಕಛೇರಿಯ ಮುಖ್ಯಸ್ಥರಾದ ಡಾ. ಝಲಾಲೆಮ್ ಬಿರಹಾನು ಟಾಪ್ಲಿ ಅವರು “ಸೈಕಲ್ ಅಗರಬತ್ತಿ”ಯನ್ನು ಬೆಳಗಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು.
ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. ಇಲ್ಲಿನವಿಶಿಷ್ಟವಾದ ನ್ಯಾಯದಾನ, ಆಣೆಮಾತು ತೀರ್ಮಾನದಿಂದ ಅನೇಕ ಕುಟುಂಬಗಳ ಸಾಂಸಾರಿಕ, ವ್ಯವಹಾರ ಸಮಸ್ಯೆಗಳು ಸುಲಲಿತವಾಗಿ, ಸೌಹಾರ್ದಯುತವಾಗಿ ಪರಿಹಾರವಾಗಿ ಎಲರೂ ಪ್ರೀತಿ ವಿಶ್ವಾಸದಿಂದ ಸುಖ-ಶಾಂತಿಯ ಜೀವನ ನಡೆಸುತ್ತಿದ್ದಾರೆ.