ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Browsing: government
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ. ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಸುತ್ತೋಲೆ ಹೊರಡಿಸಿದೆ.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್, ಎನ್‌ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.
ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಂಗ್ರಹಿಸಲು ಮಹಿಳಾ ಸ್ವಸಹಾಯ ಗುಂಪುಗಳ (ಎಸ್‌ಎಚ್‌ಜಿ) ನೆರವು ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.
ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.
ಪುತ್ತೂರು: ಸಜಂಕಾಡಿ ಸರಕಾರಿ ಶಾಲೆಯಲ್ಲಿ ಮನೆಗೊಂದು ಗಿಡ ಎನ್ನುವ ವಿಶಿಷ್ಟ ಪರಿಕಲ್ಪನೆಯಡಿ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಯಶೋಧ ಅವರು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಂಪಿಗೆ ಗಿಡ ನೆಟ್ಟು…