ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ವೈಭವದಿಂದ ಜರಗಿತು.
ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ಜರಗಿತು.
ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಗಣಪತಿ, ದುರ್ಗೆ, ದೈವಗಳಾದ ವ್ಯಾಘ್ರ ಚಾಮುಂಡಿ, ಮೂಕಾಂಬಿ ಗುಳಿಗ ದೈವಗಳ ಪ್ರತಿಷ್ಠೆ ಶುಕ್ರವಾರ ನಡೆದಿದ್ದು, ಶನಿವಾರ ಬ್ರಹ್ಮಕಲಶೋತ್ಸವ ಜರಗಿತು.
ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಪಂಚಾಮೃತಾಭಿಷೇಕ, ಇಂದ್ರಾದಿ ದಿಕ್ಪಾಲ ದೇವತೆಗಳ ಪ್ರತಿಷ್ಠೆ, ಮಹಾಬಲಿಪೀಠದ ಪ್ರತಿಷ್ಠೆ ನಡೆದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಜರಗಿತು.
ರಾತ್ರಿ 7.30ಕ್ಕೆ ರಂಗಪೂಜೆ, ಮಹಾಪೂಜೆ ನಡೆದು, ಶ್ರೀ ಸುಬ್ರಹ್ಮಣ್ಯ ದೇವರ ಬಲಿ ಹೊರಡಲಿದೆ. ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಮೇಲ್ಮಜಲು ಸಾರ್ವಜನಿಕ ಕಟ್ಟೆಪೂಜೆ, ಸಂಪ್ಯ ಶ್ರೀ ಗಣೇಶ ಸುಬ್ರಹ್ಮಣ್ಯ ಕಟ್ಟೆಗೆ ದೇವರ ಸವಾರಿ ನಡೆಯಲಿದೆ.
ಭಾನುವಾರ ಬೆಳಿಗ್ಗೆ ತುಲಾಭಾರ ಸೇವೆ ನಡೆದು ದೇವರ ಬಲಿ ಹೊರಡಲಿದೆ. ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನದ ಬಳಿಕ ವ್ಯಾಘ್ರ ಚಾಮುಂಡಿ, ಗುಳಿಗ ದೈವದ ನೇಮೋತ್ಸವ ನಡೆಯಲಿದೆ.
ಏ. 29, 30ರಂದು ಉಳ್ಳಾಲ್ತಿ, ಉಳ್ಳಾಕ್ಲು, ಸಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ.