Friday, November 22
Share News

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು.

ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇರುವಷ್ಟು ಕಾನೂನು ಬೇರೆಲ್ಲೂ ಇಲ್ಲ. ಹಾಗಾಗಿ ದೇವಸ್ಥಾನಗಳಿಗೆ ಬರುವ ಅನುದಾನವೂ ಕಡಿಮೆಯಾಗಿದೆ. ಆದ್ದರಿಂದ ಇಂದು ಗ್ರಾಮಸ್ಥರೇ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಶುಭಹಾರೈಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ ರೈ, ಬಾಲಕೃಷ್ಣ ಬೋರ್ಕೃರ್, ಸುಧಾಕರ್ ರಾವ್ ಆರ್ಯಾಪು, ಡಾ. ಸುರೇಶ್ ಪುತ್ತೂರಾಯ, ಸಂಜೀವ ಪೂಜಾರಿ ಕೂರೇಲು, ಮಹಾಬಲ ರೈ ವಳತ್ತಡ್ಕ, ಜಿ.ಕೆ. ಭಟ್, ಸೀತಾರಾಮ ರೈ, ಜಯಂತ ಶೆಟ್ಟಿ ಕಂಬಳತ್ತಡ್ಡ, ಗಿರೀಶ್ ಕಿನ್ನಿಮಜಲು, ಬಾಲಕೃಷ್ಣ ದೇವಸ್ಯ, ಡಾ. ಸತೀಶ್ ಎ.ಪಿ. ಮರಿಕೆ ಮೊದಲಾದವರು ಉಪಸ್ಥಿತರಿದ್ದರು.


Share News

Comments are closed.

Exit mobile version