ಟ್ರೆಂಡಿಂಗ್ ನ್ಯೂಸ್

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ

GL
ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು.

chennai-shopping
maithri

ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತದೊಂದಿಗೆ ನೆರವೇರಿತು. ಸತತವಾಗಿ 3 ವರ್ಷಗಳಿಂದ ಮಾತಾಭಗಿನಿಯರಿಗೆ ಲಲಿತಾ ಸಹಸ್ರನಾಮ ಹೇಳಿಕೊಟ್ಟ ನೆಲೆಯಲ್ಲಿ ವೇದಮೂರ್ತಿ ಉದಯ್ ಭಟ್ ಅವರನ್ನು ಗೌರವಿಸಲಾಯಿತು . ಸಂಸ್ಥೆಯ ಸಿ ಎಂ. ಡಿ ಕೇಶವ ಪ್ರಸಾದ್ ಮುಳಿಯ ಪ್ರಾಸ್ತಾವಿಕವಾಗಿ ಮಾತನಾಡಿ, ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡ ಎಲ್ಲಾ ಮಹಿಳೆಯರಿಗೆ ‘ಕುಂಕುಮ ಮಹತಿ ’ ಎಂಬ ಶ್ರೇಷ್ಠ ಕಿರುಹೊತ್ತಗೆಯನ್ನು ಕಿರು ಉಡುಗೊರೆಯಾಗಿ ನೀಡಿದರು. ನವ ವಿನ್ಯಾಸದ ಸ್ವರ್ಣ ಲೇಪಿತ ಬೆಳ್ಳಿಯ ಕುಂಕುಮ ಕರಡಿಗೆಯನ್ನು ಹಿರಿಯ ಮಹಿಳೆಯರಿಂದ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಉಸ್ತುವಾರಿ ಸಂಸ್ಥೆಯ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಸಹಕಾರವನ್ನು ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ಸಿಬಿಜಿ ಘಟಕ ಅಧ್ಯಯನಕ್ಕೆ ರಾಜ್ಯದಿಂದ ತಂಡ | ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕದ ಬಗ್ಗೆ ಬಿಬಿಎಂಪಿಯಲ್ಲೂ ಚರ್ಚೆ ನಡೆದಿದೆ.…