ಪುತ್ತೂರು: ಬೊಳ್ವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ, ವಿಶ್ವಕರ್ಮ ಮಹಿಳಾ ಮಂಡಳಿ, ದ.ಕ.ಜಿಲ್ಲಾ ಚಿನ್ನದ ಕೆಲಸಗಾರರ ಸಂಘ ಮಂಗಳೂರು, ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಚಿನ್ನ, ಬೆಳ್ಳಿ ತೂಕ ಮಾಡುವ ಇಲೆಕ್ಟ್ರಾನಿಕ್ ಯಂತ್ರಕ್ಕೆ ಮೊಹರು ಅಥವಾ ಸೀಲ್ ಹಾಕುವ ಕಾರ್ಯಕ್ರಮ ಆ. 30ರ ಶನಿವಾರ ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ನಡೆಯುವ ಈ ಕಾರ್ಯಕ್ರಮದ ಸದುಪಯೋಗವನ್ನು ಚಿನ್ನದ ಕೆಲಸಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕು. ಪುತ್ತೂರು, ಕಡಬ, ಸುಳ್ಯ ತಾಲೂಕಿನ ವ್ಯಾಪ್ತಿಯ ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ, ಕಾರ್ಯದರ್ಶಿ 9341203969, 9980280562, ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ, ಕಾರ್ಯದರ್ಶಿ 9900828277, 9845220437, ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ, ಕಾರ್ಯದರ್ಶಿ 9448328142, 7892130298 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.