pashupathi
ಟ್ರೆಂಡಿಂಗ್ ನ್ಯೂಸ್

ಸೆ. 30ರಂದು ಪುಡಾ ಅದಾಲತ್ | ಏಕ ನಿವೇಶನ ಗೊಂದಲ ನಿವಾರಣೆ, 4ಕೆ ನಿಯಮಾವಳಿ ಜಾರಿ ಸಂಬಂಧಿತ ಅರ್ಜಿಗಳ ವಿಲೇವಾರಿಗೆ ಕ್ರಮ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇದೇ ಮೊದಲ ಬಾರಿಗೆ ಪುಡಾದಿಂದ ಅದಾಲತ್ ನಡೆಸಲು ಯೋಜಿಸಿದ್ದು, ಸೆ. 30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಆಯೋಜಿಸಲಾಗುತ್ತಿದೆ ಎಂದು ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ತಿಳಿಸಿದರು.

akshaya college

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ಸಂಬಂಧಿಸಿ ಗೊಂದಲ ನಿವಾರಣೆ ಹಾಗು 4ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವ ಸಂಬಂಧ ಯೋಜನಾ ಪ್ರಾಧಿಕಾರ ಅದಾಲತ್ ನಡೆಸುತ್ತಿದೆ.

2024ರ ಆ. 7ರಿಂದ ಕಡಬ ಮತ್ತು ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಸ್ವೀಕೃತವಾಗಿರುವ ಏಕ ನಿವೇಶನ ವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಪುತ್ತೂರು ನಗರ ಯೋಜನಾ ಪ್ರಾಧಿಕಾರಕ್ಕೆ ನೀಡಲಾಗಿದೆ. ಅದರಂತೆ ಈಗಾಗಲೇ ಪ್ರಾಧಿಕಾರದ ವತಿಯಿಂದ ಕಡಬ ಮತ್ತು ಪುತ್ತೂರು ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಪ್ರಕರಣವನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ. 2025ರ ಮೇ 7ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲಿ ಎಕ ನಿವೇಶನ, ಬಹುನಿವೇಶನ, ಕಟ್ಟಡಗಳಿಗೆ ತಾಂತ್ರಿಕ ಅನುಮೋದನೆ ನೀಡುವ ಸಂಬಂಧ 4ಕೆ ನಿಯಮಗಳನ್ನು ನಿರೂಪಿಸಲಾಗಿದೆ. ಈ ನಿಯಮಾವಳಿಯಂತೆ ಏಕ ನಿವೇಶನ ವಿನ್ಯಾಸ ಅನುಮೋದನೆ ನೀಡಲು ಕೆಲವೊಂದು ಗೊಂದಲಗಳು ಹಾಗೂ ನಿಯಮಾವಳಿಗಳ ಅಂಶಗಳನ್ನು ಅರ್ಥೈಸಿಕೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದು ಗಮನಿಸಿ ಈ ಅದಾಲತ್ ಅನ್ನು ರೂಪಿಸಲಾಗಿದೆ. ಈಗಾಗಲೇ ಬಂದ ಅರ್ಜಿಯಲ್ಲಿ ತಿರಸ್ಕೃತ ಆರ್ಜಿಯನ್ನು ಹೊರತುಪಡಿಸಿ ಕೆಲವೊಂದು ಸರಿಯಾದ ದಾಖಲೆ ನೀಡುವಂತೆ ಹಿಂಬರಹ ನೀಡಿದ ಪುತ್ತೂರು ಕಡಬ ತಾಲೂಕಿನ ಒಟ್ಟು 558 ಪ್ರಕರಣಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಅದಾಲತ್ ನಡೆಯಲಿದೆ ಎಂದರು.

ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಪಿ. ಶೆಟ್ಟಿ, ಅನ್ವರ್ ಖಾಸಿಂ, ಸದಸ್ಯ ಕಾರ್ಯದರ್ಶಿ ಗುರುಪ್ರಸಾದ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

LED Tvಗಳ ಮೇಲೆ ಬೊಂಬಾಟ್ ಆಫರ್: 4444 ರೂ.ನಿಂದ ಆರಂಭ | ನಮ್ಮೂರಿನ ಟಿವಿ ಬ್ರ್ಯಾಂಡ್ STVC ನೀಡಿದೆ ಹಬ್ಬಗಳ ಆಫರ್

ಪುತ್ತೂರಿನಲ್ಲೇ ತಯಾರಾದ ಪುತ್ತೂರಿನ ಬ್ರಾಂಡ್ ಆಗಿರುವ STVC (ಶಂಕರ್ಸ್ ಟಿವಿ ಕ್ಲಿನಿಕ್)ನಲ್ಲಿ…

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ…