ಪುತ್ತೂರು: ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಶನಿವಾರ ಸಂಜೆ ಚಾಲನೆ ನೀಡಲಾಯಿತು.
ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಿ, ಶುಭಹಾರೈಸಿದರು.
ಮುಖ್ಯ ಅತಿಥಿಯಾಗಿದ್ದ ಭಟ್ & ಭಟ್ ಪ್ರೊಡಕ್ಟ್ಸ್’ನ ಸುದರ್ಶನ್ ಭಟ್ ಬೆದ್ರಾಡಿ ಅವರು ಶುಭಹಾರೈಸಿದರು.
ವಿಜಯ ಸಾಮ್ರಾಟ್ ಸಂಸ್ಥಾಪಕಾಧ್ಯಕ್ಷ, ಪಿಲಿಗೊಬ್ಬು ಸಮಿತಿ ಗೌರವಾಧ್ಯಕ್ಷ ಸಹಜ್ ಜೆ. ರೈ ಬಳಜ್ಜ, ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಸಂಚಾಲಕ ನಾಗರಾಜ್ ನಡುವಡ್ಕ, ಕಾರ್ಯಾಧ್ಯಕ್ಷ ಸುಜಿತ್ ರೈ ಪಾಲ್ತಾಡ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ, ರತನ್ ರೈ ಕುಂಬ್ರ ಮೊದಲಾದವರು ಉಪಸ್ಥಿತರಿದ್ದರು.