ಪುತ್ತೂರು: ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭ ನಡೆಯಲಿರುವ ಅಶೋಕ ಜನ ಮನ ಎರಡು ಪ್ರಮುಖ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.
ಮೊದಲನೆಯದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಎರಡನೆಯದಾಗಿ, ದೋಸೆ ಮೇಳ.
ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ ಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. 11 ಗಂಟೆಗೆ ಸಿಎಂ ಆಗಮಿಸಲಿದ್ದಾರೆ. ಅವರ ಜೊತೆಗೆ ಜಿಲ್ಲಾ ಉಸ್ತುವಾರು ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ. ಖಾದರ್, ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಸೇರಿದಂತೆ ನಿಗಮ ಮಂಡಳಿಗಳ ಪ್ರಮುಖರು ಭಾಗವಹಿಸಲಿದ್ದಾರೆ. ಹಾಗೆಂದು ಇದು ಪಕ್ಷದ ಕಾರ್ಯಕ್ರಮವಲ್ಲ. ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಲಿದ್ದಾರೆ ಎಂದರು.
ದೋಸೆ ಮೇಳ:
ದೋಸೆ ಮೇಳ ಆಯೋಜಿಸಲು ಸಿದ್ಧತೆ ನಡೆದಿದೆ. ಸುಮಾರು 70 ಸಾವಿರದಷ್ಟು ದೋಸೆಗಳನ್ನು ತಯಾರಿಸಲು ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ ಎಂದು ಅಶೋಕ್ ರೈ ಮಾಹಿತಿ ನೀಡಿದರು.
ಈ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಅಥವಾ ಇನ್ನಾವುದೇ ಉದ್ದೇಶ ಇಲ್ಲ. ಈ ಒಂದು ತಿಂಗಳಿಗೆ 35 ಲಕ್ಷ ರೂ.ವನ್ನು ತೆಗೆದಿಡಬೇಕು. ಈ ಕಾರ್ಯಕ್ರಮದ ಯಶಸ್ಸಿಗಾಗಿ ಎಷ್ಟು ಕಷ್ಟ ಪಡುತ್ತಿದ್ದೇನೆ ಎನ್ನುವುದು ನನಗೆ ಹಾಗೂ ದೇವರಿಗೆ ಮಾತ್ರ ಗೊತ್ತು. ಇದರಲ್ಲಿ ತನಗೆ ಸಿಗುವುದು ದನ್ಯತಾ ಭಾವ ಮಾತ್ರ ಎಂದರು.