tamanvi
ಟ್ರೆಂಡಿಂಗ್ ನ್ಯೂಸ್

ಅಶೋಕ ಜನ ಮನದಲ್ಲಿ ದೋಸೆ ಮೇಳ!! ಅ. 20ರಂದು ಸಿಎಂ ಸಿದ್ದರಾಮಯ್ಯ ಭಾಗಿ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭ ನಡೆಯಲಿರುವ ಅಶೋಕ ಜನ ಮನ ಎರಡು‌ ಪ್ರಮುಖ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.

ಮೊದಲನೆಯದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಎರಡನೆಯದಾಗಿ, ದೋಸೆ ಮೇಳ.

ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ ಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. 11 ಗಂಟೆಗೆ ಸಿಎಂ ಆಗಮಿಸಲಿದ್ದಾರೆ. ಅವರ ಜೊತೆಗೆ ಜಿಲ್ಲಾ ಉಸ್ತುವಾರು ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ. ಖಾದರ್, ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಸೇರಿದಂತೆ ನಿಗಮ ಮಂಡಳಿಗಳ ಪ್ರಮುಖರು ಭಾಗವಹಿಸಲಿದ್ದಾರೆ. ಹಾಗೆಂದು ಇದು ಪಕ್ಷದ ಕಾರ್ಯಕ್ರಮವಲ್ಲ. ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಲಿದ್ದಾರೆ ಎಂದರು.

ದೋಸೆ ಮೇಳ:

ದೋಸೆ ಮೇಳ ಆಯೋಜಿಸಲು ಸಿದ್ಧತೆ ನಡೆದಿದೆ. ಸುಮಾರು 70 ಸಾವಿರದಷ್ಟು ದೋಸೆಗಳನ್ನು ತಯಾರಿಸಲು ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ ಎಂದು ಅಶೋಕ್ ರೈ ಮಾಹಿತಿ ನೀಡಿದರು.

ಈ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಅಥವಾ ಇನ್ನಾವುದೇ ಉದ್ದೇಶ ಇಲ್ಲ. ಈ ಒಂದು ತಿಂಗಳಿಗೆ 35 ಲಕ್ಷ ರೂ.ವನ್ನು ತೆಗೆದಿಡಬೇಕು. ಈ ಕಾರ್ಯಕ್ರಮದ ಯಶಸ್ಸಿಗಾಗಿ ಎಷ್ಟು ಕಷ್ಟ ಪಡುತ್ತಿದ್ದೇನೆ ಎನ್ನುವುದು ನನಗೆ ಹಾಗೂ ದೇವರಿಗೆ ಮಾತ್ರ ಗೊತ್ತು. ಇದರಲ್ಲಿ‌ ತನಗೆ ಸಿಗುವುದು ದನ್ಯತಾ ಭಾವ ಮಾತ್ರ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…