ಟ್ರೆಂಡಿಂಗ್ ನ್ಯೂಸ್

ಕನ್ನಡ ರಾಜ್ಯೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ನವಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ 12 ಮಂದಿ ಸಾಧಕರನ್ನು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

chennai-shopping
maithri

ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಮಾರ್ಗದರ್ಶನದಲ್ಲಿ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ತಹಸೀಲ್ದಾರ್, ಬಿಇಓ, ತಾಪಂ ಇಓ, ಕಸಾಪ ಅಧ್ಯಕ್ಷರಿದ್ದ ಸಮಿತಿ ಈ ಆಯ್ಕೆ ನಡೆಸಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ನರೇಂದ್ರ ರೈ ದೇರ್ಲ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಜೆ.ಸಿ. ಅಡಿಗ, ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಝೇವಿಯರ್ ಡಿಸೋಜಾ, ಸಾಹಿತ್ಯ ಕ್ಷೇತ್ರದಲ್ಲಿ ಡಾ. ರಾಜೇಶ್ ಬೆಜ್ಜಂಗಳ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಉದಯ ಕುಮಾರ್ ಯು.ಎಲ್., ಶಿಲ್ಪಕಲೆಯಲ್ಲಿ ಎಂ. ವಾಸುದೇವ ಆಚಾರ್ಯ ಬೆದ್ರಾಳ ನೆಕ್ಕರೆ, ಸಮಾಜಸೇವೆಯಲ್ಲಿ ಅಬೂಬಕ್ಕರ್ ಮುಲಾರ್ ಅಜ್ಜಿಕಟ್ಟೆ, ಶಿಕ್ಷಣ ಕ್ಷೇತ್ರದಲ್ಲಿ ರಮೇಶ್ ಉಳಯ, ಸಮಾಜ ಸೇವೆಯಲ್ಲಿ ಸಂಶುದ್ದೀನ್ ಸಾಲ್ಮರ ಪಂಜಳ ನರಿಮೊಗ್ರು, ದೈವಾರಾಧನೆಯಲ್ಲಿ ಬಾಲಕೃಷ್ಣ ಪೂಜಾರಿ ಪಲ್ಲತ್ತಾರ್ ಕುಡಿಪ್ಪಾಡಿ, ಯಕ್ಷಗಾನ ಕ್ಷೇತ್ರದಲ್ಲಿ ವಿನೋದ್ ರೈ ಸೊರಕೆ, ರಂಗಭೂಮಿ ಕ್ಷೇತ್ರದಲ್ಲಿ ಬಿ. ಪವಿತ್ರ ಹೆಗ್ಡೆ ಪಡ್ಡಾಯೂರು ಪಡ್ನೂರು ಇವರನ್ನು ಆಯ್ಕೆ ಮಾಡಲಾಗಿದೆ.

ಅದೇ ರೀತಿ ಸಂಘ ಸಂಸ್ಥೆಯಲ್ಲಿ ಪುತ್ತೂರು ಜೆಸಿಐ ಅನ್ನು ಆಯ್ಕೆ ಮಾಡಲಾಗಿದೆ. ಜೆಸಿಐನ ಪ್ರಸ್ತುತ ಅಧ್ಯಕ್ಷ ಭಾಗ್ಯೇಶ್ ರೈ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…