ಟ್ರೆಂಡಿಂಗ್ ನ್ಯೂಸ್

ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜ್ಯೋತ್ಸವ: ಪೂರ್ವಭಾವಿ ಸಭೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನವೆಂಬರ್ 29 ಹಾಗೂ 30ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ಸೀತಾ ಪರಿವಾರ ಮಹಿಳಾ ಪ್ರಮುಖರ ವಿಶೇಷ ಸಭೆ ಸುಭದ್ರ ಕಲಾ ಮಂದಿರದಲ್ಲಿ ನಡೆಯಿತು.

core technologies

ಸಭೆಯಲ್ಲಿ ಬೂತ್ ಮಟ್ಟದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ, ಹೊರೆಕಾಣಿಕೆ ಸಂಗ್ರಹಣೆ ಮತ್ತು ಕಾರ್ಯಕ್ರಮಕ್ಕೆ ಅಗತ್ಯವಾದ ವಿವಿಧ ವ್ಯವಸ್ಥೆಗಳ ಜವಾಬ್ದಾರಿಗಳ ಹಂಚಿಕೆ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ತಾಲೂಕಿನ ಎಲ್ಲಾ ಗ್ರಾಮಗಳ ಸೀತಾ ಪರಿವಾರ ಪ್ರಮುಖರು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ಧರಿಸಲಾಯಿತು.

akshaya college

ಸಭೆಯ ಅಧ್ಯಕ್ಷತೆಯನ್ನು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನರಸಿಂಹ ಪ್ರಸಾದ್ ವಹಿಸಿದ್ದರು.

ವೇದಿಕೆಯಲ್ಲಿ ಸೀತಾ ಪರಿವಾರ ತಾಲೂಕು ಅಧ್ಯಕ್ಷ ಪ್ರೇಮ ಗೌಡ, ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಟ್ರಸ್ಟ್ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸೇರಿದಂತೆ ಸಮಿತಿಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆಗಳ ಕುರಿತು ಸಮನ್ವಯ, ಕಾರ್ಯ ಯೋಜನೆ ಹಾಗೂ ಸಮುದಾಯದ ಭಾಗವಹಿಸುವಿಕೆ ಕುರಿತಂತೆ ಮಹತ್ವದ ಚರ್ಚೆಗಳು ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts