ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/- ರವರೆಗೆ ರಿಯಾಯಿತಿ ನೀಡಲಾಗುವುದು. ಗ್ರಾಹಕರ ಅನುಕೂಲಕ್ಕಾಗಿ ಹಾಗೂ ಹೆಚ್ಚಿನ ಸೇವೆಗಾಗಿ ಬೆಳಿಗ್ಗೆ ಗಂಟೆ 8ರಿಂದ ರಾತ್ರಿ 8.30ರವರೆಗೆ ನಮ್ಮ ಸಂಸ್ಥೆಯು ಕಾರ್ಯನಿರ್ವಹಿಸುತ್ತದೆ.
ಜಿ.ಎಲ್ ಗೋಲ್ಡ್ ರೇಟ್ ಪ್ರೊಟೆಕ್ಷನ್ ಪ್ಲಾನ್ ಇದರಿಂದಾಗಿ ಅಕ್ಷಯ ತೃತೀಯದ ಮುಂಗಡ ಬುಕ್ಕಿಂಗ್ ಆಫರ್‌ನ ಲಾಭವನ್ನು ನೂರಾರು ಜನ ಪಡೆದುಕೊಳ್ಳಲಿದ್ದಾರೆ ಹಾಗೂ ತಮ್ಮ ನೆಚ್ಚಿನ ಆಭರಣಗಳನ್ನು ಖರೀದಿಸಿ ಬೆಲೆ ಏರಿಕೆಯ ಆತಂಕದಿಂದ ಮುಕ್ತರಾಗಲಿದ್ದಾರೆ.
1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ “ಪ್ರಾಚಿ”ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆ್ಯಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ.
ಅದೇ ರೀತಿ “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 3500ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ. “ಪಾರ್ಥ” ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆ್ಯಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಈ ಬಾರಿ ಗ್ರಾಹಕರಿಗೆ ಕೈಗೆಟುವ ದರದಲ್ಲಿ ಗುಣಮಟ್ಟದಲ್ಲಿ ಕೊರತೆ ಆಗದಂತೆ ಅದೇ ವಿನ್ಯಾಸಗಳನ್ನು ಹೊಸ ತಂತ್ರಜ್ಞಾನದ ಮುಖಾಂತರ ಹೆಚ್ಚು ಕಾಲ ಬಾಳಿಕೆ ಬರುವಂತಹ ಲೈಟ್‌ವೈಟ್ ಆಭರಣಗಳು, ಕಲ್ಲಿನ ಆಭರಣಗಳಲ್ಲಿಯೂ ಲೈಟ್ ವೈಟ್ ಕಲೆಕ್ಷನ್, ಪೇಪರ್ ಕಾಸ್ಟಿಂಗ್ ಆಭರಣಗಳು,ವೆರೈಟಿ ಆಫ್ ಕಲ್ಲರ್ಸ್ ಸ್ಟೋನ್ಸ್ ಆಭರಣಗಳು ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ನಯದೊಂದೊಗೆ ಈ ಕೊಡುಗೆ ತಮ್ಮ ಎಲ್ಲ ಮಳಿಗೆಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.























