tamanvi
ಟ್ರೆಂಡಿಂಗ್ ನ್ಯೂಸ್

ಎಲ್ ನಿನೋ ಸಾಧ್ಯತೆ ದೃಢಪಡಿಸಿದ ಹವಾಮಾನ ಇಲಾಖೆ: ತಾಪಮಾನ ಬಿಸಿ ಏರಿಕೆ ನಡುವೆ ಮುಂಗಾರು ಮಳೆಗೆ ಕಂಟಕ!! ಬರಗಾಲ ಎದುರಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಸರ್ಕಾರಗಳು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಡುವೆ ಹವಾಮಾನ ಇಲಾಖೆಎಲ್ ನಿನೋಉಂಟಾಗುವ ಸಾಧ್ಯತೆಯನ್ನು ಸೂಚಿಸಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಎಲ್ ನಿನೋ ಎಂದರೇನು?:

ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾದಾಗ ಉಂಟಾಗುವ ಹವಾಮಾನ ವೈಪರೀತ್ಯವನ್ನೇಎಲ್ ನಿನೋಎಂದು ಕರೆಯಲಾಗುತ್ತದೆ. ಇದರ ಪರಿಣಾಮವಾಗಿ ವಾತಾವರಣದಲ್ಲಿನ ತೇವಾಂಶ ಕಡಿಮೆಯಾಗುತ್ತದೆ ಹಾಗೂ ಗಾಳಿಯ ಚಲನವಲನದಲ್ಲಿ ಬದಲಾವಣೆ ಉಂಟಾಗುತ್ತದೆ. ಇದರ ನೇರ ಪರಿಣಾಮ ನೈಋತ್ಯ ಮುಂಗಾರು ಮಳೆಯ ಮೇಲೆ ಬೀಳಲಿದ್ದು, ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಮಳೆ ಕೊರತೆಯಿಂದ ಉಷ್ಣಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಬರಗಾಲದಂತಹ ಪರಿಸ್ಥಿತಿ ಎದುರಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಮುಂಗಾರು ಮಳೆ ಕುಂಠಿತವಾದರೆ ಕೃಷಿ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಆಹಾರ ಧಾನ್ಯಗಳ ಉತ್ಪಾದನೆ ಇಳಿಕೆಯಾಗುವುದರಿಂದ ಆಹಾರ ಭದ್ರತೆ ಕುಂಠಿತವಾಗುವ ಜೊತೆಗೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಸಾಧ್ಯತೆ ಇದೆ. ಮಹಾರಾಷ್ಟ್ರ ಸರ್ಕಾರ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ.

ಒಡಿಶಾ ರಾಜ್ಯದ ತಿಟ್ಲಾಘರ್ನಲ್ಲಿ 42.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದರಿಂದ 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಶಾಲಾ ಸಮಯವನ್ನು ಬೆಳಗ್ಗೆ 7:30ರಿಂದ ಮಧ್ಯಾಹ್ನ 1:30ರವರೆಗೆ ಬದಲಿಸಲಾಗಿದೆ. ಜೊತೆಗೆ ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿಯೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಒಟ್ಟಾರೆಯಾಗಿ, ಈಗಾಗಲೇ ಉರಿಯುತ್ತಿರುವ ಭೂಮಿಗೆಎಲ್ ನಿನೋಪ್ರಭಾವ ಮತ್ತಷ್ಟು ತಾಪ ಹೆಚ್ಚಿಸುವ ಸಾಧ್ಯತೆ ಇದ್ದು, ಮುಂಬರುವ ದಿನಗಳಲ್ಲಿ ಬರಗಾಲವನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…