ಟ್ರೆಂಡಿಂಗ್ ನ್ಯೂಸ್

ಮೇ 5ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನ್ನಡ ರಸಪ್ರಶ್ನೆ ಮತ್ತು ಪುಸ್ತಕ ಬಹುಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಒಂದು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

chennai-shopping
maithri

ಮೇ 05 ಮಂಗಳವಾರದಂದು ಸಂಜೆ 4 ಗಂಟೆಗೆ ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸಂಚರಿಸುವ ಸಾರ್ವಜನಿಕರಿಗಾಗಿ “ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ” ಕಾರ್ಯಕ್ರಮ ಆಯೋಜನೆಯಾಗಿದೆ.

kannada-quiz

ಕಾರ್ಯಕ್ರಮದ ವಿಶೇಷತೆ:

ಸಾಮಾನ್ಯವಾಗಿ ಸಭಾಂಗಣಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ, ಈ ಬಾರಿ ಜನಸಾಮಾನ್ಯರ ನಡುವೆ ಅಂದರೆ ಬಸ್ ನಿಲ್ದಾಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಸ್ ನಿಲ್ದಾಣದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಸ್ಥಳದಲ್ಲೇ ಕನ್ನಡಕ್ಕೆ ಸಂಬಂಧಿಸಿದ ರಸಪ್ರಶ್ನೆಗಳನ್ನು ಕೇಳಲಾಗುವುದು. ಸರಿಯಾದ ಉತ್ತರ ನೀಡಿದವರಿಗೆ ಸ್ಥಳದಲ್ಲೇ ಪುಸ್ತಕಗಳನ್ನು ಬಹುಮಾನವಾಗಿ ನೀಡಿ ಪ್ರೋತ್ಸಾಹಿಸಲಾಗುವುದು.

ಕಾರ್ಯಕ್ರಮವನ್ನು ಪುತ್ತೂರು ಕೆ.ಎಸ್.ಆರ್.ಟಿ.ಸಿ ಮುಖ್ಯ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಕಾಶ್ ಉದ್ಘಾಟಿಸಲಿದ್ದಾರೆ. ತಾಲೂಕು ಕ.ಸಾ.ಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ಪಾಲ್ಗೊಳ್ಳಲಿದ್ದು, ಆಶಯ ನುಡಿಯನ್ನಡಲಿದ್ದಾರೆ, ರಂಗಕರ್ಮಿ ರಂಗಯ್ಯ ಬಲ್ಲಾಳ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಕನ್ನಡ ನಾಡು-ನುಡಿಯ ಬಗ್ಗೆ ಜಾಗೃತಿ ಮೂಡಿಸುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಏ. 23: ವಿಟ್ಲ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವಿಟ್ಲ ಶಾಖೆಯಲ್ಲಿ ಏಪ್ರಿಲ್ 23ರಂದು…