ಟ್ರೆಂಡಿಂಗ್ ನ್ಯೂಸ್

ಗಾನಕೋಗಿಲೆ ಎಸ್. ಜಾನಕಿ ಇನ್ನಿಲ್ಲ!!

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯ ಗಾಯಕಿ ಎಸ್. ಜಾನಕಿ ಅವರು ಇಂದು (ಜುಲೈ 11) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು.

maithri

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ವರ್ಷ ಜನವರಿಯಲ್ಲಿ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ ಹೊಂದಿದ್ದರು. ಆ ಬಳಿಕ ಪುತ್ರ ಶೋಕ ಅತಿಯಾಗಿ ಕಾಡಿತ್ತು. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾನಕಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. 1938ರ ಏಪ್ರಿಲ್ 23ರಂದು ಜನಿಸಿದರು. ಅವರು ತೆಲುಗಿನವರು ಹೆಚ್ಚು ಪ್ರಸಿದ್ಧಿ ಪಡೆದು ಕನ್ನಡಿಗರ ಮನೆಮನಗಳಿಗೆ ಹತ್ತಿರವಾದದ್ದು ಕನ್ನಡ ಹಾಡುಗಳ ಮೂಲಕ. ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಉಚ್ಚರಿಸುತ್ತಾ, ಇಲ್ಲಿನದ್ದೇ ಧ್ವನಿ ಎನ್ನುವಂತೆ ಅವರು ಸಾವಿರಾರು ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ.

ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಇರುವ ಅತಿ ದೊಡ್ಡ ವಿಶೇಷ ಶಕ್ತಿಯೆಂದರೆ ಅದು ಧ್ವನಿ ಬದಲಾವಣೆ . ಸಣ್ಣ ಮಗುವಿನ ಧ್ವನಿಯಿಂದ ಹಿಡಿದು ಪ್ರೌಢ ಮಹಿಳೆಯ ಧ್ವನಿಯವರೆಗೆ, ಕೇವಲ ಗಾಯನದ ಮೂಲಕವೇ ನಟನೆಯ ಭಾವನೆಗಳನ್ನು ತರುತ್ತಿದ್ದ ಅದ್ಭುತ ಗಾಯಕಿ ಇವರು. ಕನ್ನಡ ಚಿತ್ರರಂಗದಲ್ಲಿ ಅವರು ಹಾಡಿದ ಸದಾಹಸಿರು ಗೀತೆಗಳಿಗೆ ಕರ್ನಾಟಕ ಸರ್ಕಾರವು ಹಲವು ಬಾರಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಇಷ್ಟೇ ಅಲ್ಲದೆ, ಎಸ್​. ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿ, ಗೌರವ ಡಾಕ್ಟರೇಟ್, ತಮಿಳುನಾಡು ರಾಜ್ಯ ಸರ್ಕಾರದಿಂದ ಕಲೈಮಾಮಣಿ ಪ್ರಶಸ್ತಿ, ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಹಾಗೂ 2013ರಲ್ಲಿ ಪದ್ಮಭೂಷಣ ಪ್ರಶಸ್ತಿ ಸಿಕ್ಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಉತ್ಪನ್ನಗಳ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಾಗಾರ

ಪುತ್ತೂರು: ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ಜುಲೈ 9ರಂದು…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…