tamanvi
ಟ್ರೆಂಡಿಂಗ್ ನ್ಯೂಸ್

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ ಹಾಗೂ ಪದಸ್ವೀಕಾರ ಸಮಾರಂಭ ಆಗಸ್ಟ್ 14ರಂದು ಸಂಜೆ 7 ಗಂಟೆಗೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನ ಸಂಭ್ರಮ ಹಾಲ್ ನಲ್ಲಿ ನಡೆಯಲಿದೆ ಎಂದು ಆಡಳಿತ ಉಪಾಧ್ಯಕ್ಷ ಮನೋಹರ್ ಹೇಳಿದರು.

maithri

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಜೆಸಿಐನ ಸ್ಥಳೀಯ ಸಂಸ್ಥೆಯಾಗಿರುವ ಜೆಸಿಐ ಪುತ್ತೂರು ನಿಯೋ ಪ್ರೈಮ್’ನ ಚಾರ್ಟರ್ ಅಧ್ಯಕ್ಷರಾಗಿ ಅಶ್ವಿನಿ ಕೆ. ಆಯ್ಕೆಯಾಗಿದ್ದಾರೆ. ಮುಂದಿನ ಒಂದು ವರ್ಷ ಅವರ ನೇತೃತ್ವದಲ್ಲಿ ಸಂಸ್ಥೆ ಮುನ್ನಡೆಯಲಿದೆ ಎಂದರು.

ನಿಯೋಜಿತ ಅಧ್ಯಕ್ಷೆ ಅಶ್ವಿನಿ ಕೆ. ಮಾತನಾಡಿ, ಜೆಸಿಐ ಪುತ್ತೂರು ನಿಯೋ ಪ್ರೈಮ್ ಇದರ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಝೋನ್ 15ರ ಝೋನ್ ಪ್ರೆಸಿಡೆಂಟ್ ಸಂತೋಷ್ ಶೆಟ್ಟಿ ಆಗಮಿಸಲಿದ್ದಾರೆ. ಝೋನ್ ವೈಸ್ ಪ್ರೆಸಿಡೆಂಟ್ ಹರಿಣಾಕ್ಷಿ ಕರ್ಕೇರ, ಟೀಮ್ ಕೋಚ್, ಜೆಸಿಐ ರಾಷ್ಟ್ರೀಯ ತರಬೇತುದಾರ ವೇಣುಗೋಪಾಲ್ ಎಸ್.ಜೆ. ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಪ್ರಜ್ವಲ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…