tamanvi
ಟ್ರೆಂಡಿಂಗ್ ನ್ಯೂಸ್

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಇದೀಗ ವಾಣಿಜ್ಯ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಅಭಿನಂದನ್ ವರ್ಧಮಾನ್ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. 2019ರಲ್ಲಿ ಮಿಗ್-21 ಬೈಸನ್ ಯುದ್ಧವಿಮಾನದಲ್ಲಿ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿ, ಪಾಕಿಸ್ತಾನ ವಾಯುಪಡೆಯ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ ಬಳಿಕ ಅವರ ಸಾಹಸ ದೇಶದಾದ್ಯಂತ ಗಮನ ಸೆಳೆದಿತ್ತು.

ಸದ್ಯ ಅಭಿನಂದನ್ ಅವರು FLY91 ಸಂಸ್ಥೆಯಲ್ಲಿ ATR 72-600 ವಿಮಾನಗಳ ಕಾರ್ಯಾಚರಣೆಗೆ ಸಂಬಂಧಿಸಿದ ತರಬೇತಿಯಲ್ಲಿ ನಿರತರಾಗಿದ್ದಾರೆ. ಗೋವಾ–ಹೈದರಾಬಾದ್ ಮಾರ್ಗದಲ್ಲಿ ATR ವಿಮಾನಗಳ ಹಾರಾಟಕ್ಕೆ ಸಂಬಂಧಿಸಿದ ತರಬೇತಿ ಪೂರ್ಣಗೊಳಿಸಿದ ಬಳಿಕ ಅವರು ವಾಣಿಜ್ಯ ವಿಮಾನ ಸೇವೆ ಆರಂಭಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಅವರು 2026ರ ಆಗಸ್ಟ್‌ನಲ್ಲಿ FLY91ಗೆ ಸೇರ್ಪಡೆಗೊಂಡಿದ್ದಾರೆ.

ಗೋವಾ ಮೂಲದ FLY91 ಸಂಸ್ಥೆ 2024ರ ಮಾರ್ಚ್‌ನಲ್ಲಿ ವಾಣಿಜ್ಯ ವಿಮಾನಯಾನ ಸೇವೆ ಆರಂಭಿಸಿತ್ತು. ಸದ್ಯ ಸಂಸ್ಥೆಯ ಬಳಿ ಆರು ATR 72-600 ವಿಮಾನಗಳಿದ್ದು, ಗೋವಾ ಮತ್ತು ಹೈದರಾಬಾದ್‌ನಲ್ಲಿ ಕಾರ್ಯಾಚರಣಾ ನೆಲೆಗಳನ್ನು ಹೊಂದಿದೆ.

ಸಣ್ಣ ನಗರಗಳನ್ನು ಪ್ರಮುಖ ವಿಮಾನಯಾನ ಕೇಂದ್ರಗಳೊಂದಿಗೆ ಸಂಪರ್ಕಿಸುವ ಮೂಲಕ ದೇಶದ ಪ್ರಾದೇಶಿಕ ವಾಯು ಸಂಪರ್ಕವನ್ನು ಹೆಚ್ಚಿಸುವುದು FLY91ನ ಪ್ರಮುಖ ಉದ್ದೇಶವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…