ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.
ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ. ಆದರೆ ರೇಷನ್ ಕಾರ್ಡ್ ತಿದ್ದುಪಡಿಗೆ ಜನವರಿ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ.
ರೇಷನ್ ಕಾರ್ಡ್ ತಿದ್ದುಪಡಿಯ ಕೊನೆಯ ದಿನಾಂಕದ ಬಗ್ಗೆ ಕೊನೆಗೂ ಆಹಾರ ಸರಬರಾಜು ಇಲಾಖೆ ಸ್ಪಷ್ಟನೆ ಕೊಟ್ಟಿದೆ. ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಪಡಿತರ ಚೀಟಿದಾರರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಅಲ್ಲದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದಕ್ಕೆ ಸರ್ಕಾರದಿಂದ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ಜನಿಕರು ಆತಂಕಕ್ಕೆ ಒಳಗಾಗದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ.
ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಜನರಿಗೆ ಈ ವಿಷಯವಾಗಿ ಗೊಂದಲ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತವಾದ ಮಾರ್ಗಸೂಚಿಯನ್ನು ಹೊರಡಿಸುವುದಾಗಿಯೂ ಹೇಳಲಾಗಿದೆ.