Thursday, November 21
Share News

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಗೆಲುವಿನ ಹಿನ್ನೆಲೆಯಲ್ಲಿ ಟ್ರಂಪ್ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು. ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ ಎಂದರು. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರತಿದಿನ, ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲಾನ್ ಮಸ್ಕ್ ಅವರು ಚುನಾವಣೆಯಲ್ಲಿ ಟ್ರಂಪ್ ಅವರನ್ನು ಉತ್ಸಾಹದಿಂದ ಬೆಂಬಲಿಸಿದ್ದಾರೆ ಮತ್ತು ಹಣವನ್ನು ಸಹ ಒದಗಿಸಿದ್ದಾರೆ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ಡೊನಾಲ್ಡ್ಟ್ರಂಪ್ಗೆ ಹೃತ್ಪೂರ್ವಕ ಅಭಿನಂದನೆಗಳು, ಒಟ್ಟಾಗಿ, ನಮ್ಮ ಜನರ ಒಳಿತಿಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡೋಣ ಎಂದು ಬರೆದಿದ್ದಾರೆ.


Share News

Comments are closed.

Exit mobile version