ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭಾಷಾ ವಿಭಾಗ ಹಾಗೂ ಮಾನವಿಕ ವಿಭಾಗಗಳಿಂದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಕಾಲೇಜು ಆಯೋಜಿಸುತ್ತಿದೆ. ಕಾಲೇಜಿನ ಐಕ್ಯೂಎಸಿ, ಮಾನವಿಕ ವಿಭಾಗ ಹಾಗೂ ಭಾಷಾ ವಿಭಾಗಗಳ ಸಹಯೋಗದೊಂದಿಗೆ ನ. 14 ಹಾಗೂ 15ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಪ್ರಬಂಧ ಮಂಡನೆ ನಡೆಯಲಿದೆ ಎಂದು ಸಂಯೋಜಕ ಶಿವಪ್ರಸಾದ್ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.14ರಂದು ಕಾಲೇಜಿನ ಭಾಷಾ ವಿಭಾಗದದಿಂದ “ಭಾಷಾ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ ಹಾಗೂ ಭವಿಷ್ಯದ ಸಾಧ್ಯತೆ” ಎನ್ನುವ ವಿಚಾರದ ಬಗೆಗೆ ನಡೆಯಲಿರುವ ವಿಚಾರ ಸಂಕಿರಣ ದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾಠ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ವಹಿಸಲಿದ್ದು, ಉದ್ಘಾಟನೆಯನ್ನು ಹಾಗೂ ದಿಕ್ಕೂಚಿ ಭಾಷಣವನ್ನು ಡಾ.ಜಿ.ಎನ್ ಭಟ್ ನಿವೃತ್ತ ಪ್ರಾಂಶುಪಾಲ, ಕೆನರಾ ಕಾಲೇಜು ಮಂಗಳೂರು ಇವರು ನೆರವೇರಿಸಲಿದ್ದಾರೆ. ಅನಂತರ ವಿಚಾರಗೋಷ್ಟಿ ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಜಿ.ಎನ್ ಭಟ್ ನಿವೃತ್ತ ಪ್ರಾಂಶುಪಾಲ, ಕೆನರಾ ಕಾಲೇಜು ಮಂಗಳೂರು, ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಚ್ ಮಾಧವ ಭಟ್, ಕಾಸರಗೋಡಿನ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಡಾ.ರಾಧಾಕೃಷ್ಣ ಬೆಳ್ಳೂರು, ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಿಂದಿ ವಿಭಾಗದ ಡಾ. ತಾರು.ಎಸ್ ಪವಾರ್ ಭಾಗವಹಿಸಲಿದ್ದಾರೆ ಎಂದರು.
ಮಧ್ಯಾಹ್ನ ನಂತರದ ಅವಧಿಯಲ್ಲಿ ವಿವಿದೆಡೆಗಳಿಂದ ಆಗಮಿಸಿದ ಉಪನ್ಯಾಸಕರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಬಂಧ ಮಂಡನೆ ನಡೆಯಲಿದೆ. ನಂತರ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಹಿಸಲಿದ್ದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಸಮಾರೋಪ ಸಮಾರಂಭದ ಭಾಷಣವನ್ನು ನೆರವೇರಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಭಾಗವಹಿಸಲಿದ್ದಾರೆ ಎಂದರು.
ನ. 15ರಂದು ಕಾಲೇಜಿನ ಮಾನವಿಕ ವಿಭಾಗದಿಂದ ನಡೆಯಲಿರುವ “ಸಮಾಜ ವಿಜ್ಞಾನದ ಪ್ರಸ್ತುತ ಸ್ಥಿತಿಗತಿ ಹಾಗೂ ಭವಿಷ್ಯದ ಸಾಧ್ಯತೆಗಳು” ಎನ್ನುವ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ.ತಾಳ್ತಜೆ ವಸಂತ ಕುಮಾರ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಹಾಗೂ ದಿಕ್ಕೂಚಿ ಭಾಷಣವನ್ನು ಹಾವೇರಿ ಯುನಿವರ್ಸಿಟಿಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿದ್ದಪ್ಪ .ಟಿ ಬಾಗಲಕೋಟ್ ಇವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅನಂತರ ವಿಚಾರಗೋಷ್ಟಿ ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ, ಹಾವೇರಿ ಯುನಿವರ್ಸಿಟಿಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್.ಟಿ ಬಾಗಲಕೋಟ್ ಭಾಗವಹಿಸಲಿದ್ದಾರೆ ಎಂದರು.
ಮಧ್ಯಾಹ್ನ ನಂತರದ ಅವಧಿಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ ಉಪನ್ಯಾಸಕರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ ವಿವಿಧ ಮಾನವಿಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬಂಧ ಮಂಡನೆ ನಡೆಯಲಿದೆ.ನಂತರ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಹಿಸಲಿದ್ದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ರವೀಂದ್ರ ಬೈಪದವು ಸಮಾರೋಪ ಸಮಾರಂಭದ ಭಾಷಣವನ್ನು ನೆರವೇರಿಸಲಿದ್ದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ, ಸ್ನಾತಕೋತ್ತರ ವಿಭಾಗ ಡೀನ್ ಡಾ. ವಿಜಯ ಸರಸ್ವತಿ, ವಿಚಾರ ಸಂಕಿರಣದ ಸಂಯೋಜಕಿ ಡಾ.ದುರ್ಗಾರತ್ನ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾ ಉಪಸ್ಥಿತರಿದ್ದರು.