ಕೇರಳKeralaದ ವಯನಾಡ್ನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide)ದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ವಯನಾಡ್ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ. ಭೂಕುಸಿತದಲ್ಲಿ ಉಂಟಾದ ಅವಘಡದಿಂದಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದ್ದು, ನಾಪತ್ತೆಯಾಗಿರುವ ಹಲವು ಮಂದಿಯ ಕುರುಹು ಇನ್ನೂ ಪತ್ತೆಯಾಗಿಲ್ಲ. ಕೇರಳದ ಜನರು ಮಾತ್ರವಲ್ಲದೇ ಹತ್ತಾರು ಕನ್ನಡಿಗರು ಕೂಡ ವಯನಾಡ್ ಭೂಕುಸಿತಕ್ಕೆ ಒಳಗಾಗಿದ್ದು, ಅವರ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ.
ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಿಂದ ಮೃತಪಟ್ಟ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆಯನ್ನು ಮಾಡಿದ್ದಾರೆ.
ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಿಂದ ಮೃತಪಟ್ಟ ಕನ್ನಡಿಗರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
“ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ” ಎಂದು ಸಿಎಂ ಹೇಳಿದ್ದಾರೆ.
ಅಲ್ಲದೇ, ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಸಿಎಂ, ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ’ ಎಂದು ಹೇಳಿದ್ದಾರೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ. ದೂರವಾಣಿ ಮೂಲಕ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದ್ದೇವೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಭರವಸೆ ನೀಡಿ ಸಾಂತ್ವನ ಹೇಳಿದ್ದಾರೆ.