ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆ ಯಂತೆ ಅ.17ರಿಂದ 19ರವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೊಗದಂತೆ ಸಾರ್ವಜನಿಕರು/ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ.ಕ.ದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಅ.17 ಮತ್ತು 18ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ದ.ಕ. ಜಿಲ್ಲಾಡಳಿತ ಅ.19ರವರೆಗೆ ಭಾರಿ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಮೀನುಗಾರರಿಗೆ ಸೂಚಿಸಿದೆ.